ಉಡುಪಿ : ಜಿಲ್ಲಾಡಳಿತವೇ ಭೂಮಿ ಮಂಜೂರು ಮಾಡಿದೆ – ಶಾಸಕ ಸುರೇಶ್‌ ಶೆಟ್ಟಿ ಗುರ್ಮೆ

0
35

ಆರು ತಿಂಗಳ ಹಿಂದೆಯೇ ಜಿಲ್ಲಾಧಿಕಾರಿ ಮತ್ತಿತರ ಅಧಿಕಾರಿಗಳು ಪರಿಶೀಲಿಸಿ 6.30 ಎಕ್ರೆಯನ್ನು ಯುವಜನ ಸಬಲೀಕರಣ ಇಲಾಖೆಗೆ ಜಿಲ್ಲಾಡಳಿತ ಮಂಜೂರು ಮಾಡಿದೆ ಎಂದು ಶಾಸಕ ಸುರೇಶ್‌ ಶೆಟ್ಟಿ ಗುರ್ಮೆ ತಿಳಿಸಿದ್ದಾರೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆವರು, ಪಕ್ಷಾತೀತ, ಜಾತ್ಯಾತೀತವಾಗಿ ಕಂಬಳ ಸಮಿತಿ ರಚಿಸಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಆಮಂತ್ರಣ ಪತ್ರಿಕೆ ಕಳುಹಿಸಿ ಒಪ್ಪಿಗೆ ಪಡೆಯಲಾಗಿದೆ.

ಕಾಂಗ್ರೆಸ್‌ ನ ನಾಯಕರ ಫೋಟೋವನ್ನು ಮುದ್ರಿಸಲಾಗಿದೆ. ಕೊನೆಯ ಕ್ಷಣದಲ್ಲಿ ವಿನಯ ಕುಮಾರ್‌ ಸೊರಕೆ ಅವರು ಉಸ್ತುವಾರಿ ಸಚಿವರಿಗೆ ಒತ್ತಡ ಹಾಕಿ ಕಂಬಳವನ್ನು ನಿಲ್ಲಿಸುವ ರಾಜಕೀಯ ಮುಂದುವರಿಸಿದ್ದಾರೆ ಎಂದು ದೂರಿದರು.

ಕಾಪು ಕ್ಷೇತ್ರದ ಅಭಿವೃದ್ಧಿಯನ್ನು ಸಹಿಸದ ಸೊರಕೆಯವರು ಚಿಲ್ಲರೆ ರಾಜಕಾರಣ ಮಾಡುತ್ತಿದ್ದಾರೆ. ಸಂಘರ್ಷದ ರಾಜಕೀಯ ಮುಂದುವರಿಸಿದರೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡುವುದಾಗಿ ಅವರು ಎಚ್ಚರಿಸಿದರು.

ಶಾಸಕ ವಿ. ಸುನಿಲ್‌ ಕುಮಾರ್‌ಮಾತನಾಡಿ, ಕಂಬಳಕ್ಕೆ ಅನುದಾನ ಕೊಡು ವುದು, ಬಿಡುವುದು ಸರಕಾರಕ್ಕೆ ಬಿಟ್ಟದ್ದು. ಅನುದಾನ ಕೊಡಲಿ, ಬಿಡಲಿ ಕಂಬಳ ಸಮಿತಿ ನಿರ್ವಹಿಸುತ್ತದೆ ಎಂದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಶಿಲಾನ್ಯಾಸ ನಡೆಸಿರುವ ಕಾರಣಕ್ಕೆ ಪ್ರಕರಣ ದಾಖಲಿಸಿ ಬೆದರಿಕೆ ಒಡ್ಡುವ ಪ್ರಯತ್ನ ನಡೆದಿದೆ. ಇಂತಹ ಘಟನೆಗಳು ಮುಂದುವರಿದರೆ ಜಿಲ್ಲೆಯ ಶಾಸಕರು ಸೇರಿ ಪ್ರತಿಭಟನೆ ನಡೆಸುತ್ತೇವೆ ಎಂದರು.

ಶಾಸಕರಾದ ಯಶ್‌ಪಾಲ್‌ ಎ.ಸುವರ್ಣ, ಕಿರಣ್‌ ಕುಮಾರ್‌ ಕೊಡ್ಗಿ, ಮಾಜಿ ಶಾಸಕ ಲಾಲಾಜಿ ಮೆಂಡನ್‌, ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್‌ ಶೆಟ್ಟಿ, ದಿನಕರ ಶೆಟ್ಟಿ ಹೆರ್ಗ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here