ಮಾರ್ಚ್ 6ರಿಂದ 8 – ಕೊಡಂಗಲ್ಲು ಉಚ್ಚಂಗಿ ಮಾರಿಯಮ್ಮ ಬ್ರಹ್ಮಕಲಶೋತ್ಸವ

0
38

ಮೂಡುಬಿದಿರೆ : ಕೊಡಂಗಲ್ಲು ಉಚ್ಚಂಗಿ ಮಾರಿಯಮ್ಮ ದೇವಸ್ಥಾನದಲ್ಲಿ ಮಾ. 6ರಿಂದ 8ರವರೆಗೆ ಅಷ್ಟೋತ್ತರ ಶತ ಬ್ರಹ್ಮಕಲಶೋತ್ಸವವು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಮಾ. 6ರಂದು ಸಂಜೆ 4ರಿಂದ ಸ್ವರಾಜ್ಯ ಮೈದಾನದಿಂದ ಉಚ್ಚಂಗಿ ಮಾರಿಯಮ್ಮ ದೇವಸ್ಥಾನದವರೆಗೆ ವೈಭವದ ಹಸಿರು ಹೊರೆ ಕಾಣಿಕೆ ಮೆರವಣಿಗೆ ನಡೆಯಲಿದೆ.

ಮಾರ್ಚ್ 7ರಂದು ಬೆಳಿಗ್ಗೆಯಿಂದ ಸಂಜೆಯವರೆಗೆ ವಿವಿಧ ಭಜನಾ ತಂಡಗಳಿAದ ಭಜನಾ ಸಂಕೀರ್ತನೆ, ಸಂಜೆ 6ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದ್ದು ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ ಜೈನ್ ಉದ್ಘಾಟಿಸಲಿದ್ದಾರೆ. ಉಚ್ಚಂಗಿ ಮಾರಿಯಮ್ಮ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ದೇಜು ಅಧ್ಯಕ್ಷತೆ ವಹಿಸಲಿದ್ದು ವಿವಿಧ ದೇವಾಲಯಗಳ ಧರ್ಮದರ್ಶಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ರಾತ್ರಿ 7ರಿಂದ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ ನಡೆಯಲಿದೆ.

ಮಾ.8ರಂದು ಬೆಳಿಗ್ಗೆ 11:36ಕ್ಕೆ ಬ್ರಹ್ಮಕಲಶಾಭಿಷೇಕ ಬಳಿಕ ದೇವಿದರ್ಶನ, ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 6ಕ್ಕೆ ಧಾರ್ಮಿಕ ಸಭೆ ನಡೆಯಲಿದ್ದು ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಉದ್ಘಾಟಿಸಲಿದ್ದಾರೆ.

ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಸುರೇಶ್ ಕೋಟ್ಯಾನ್ ಅಧ್ಯಕ್ಷತೆ ವಹಿಸಲಿದ್ದು ವಿಧಾನಸಭಾಧ್ಯಕ್ಷ ಯು. ಟಿ. ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಂಸದ ಬೃಜೇಶ್ ಚೌಟ, ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಅಭಯಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ. ರೈ, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ ಆರ್. ಪೂಜಾರಿ ಸಹಿತ ಹಲವು ಮಂದಿ ಗಣ್ಯರು ಭಾಗವಹಿಸಲಿದ್ದಾರೆ.

ಮಧ್ಯಾಹ್ನ 2.30ರಿಂದ ಬೆಳುವಾಯಿ ಯಕ್ಷದೇವ ಮಿತ್ರಕಲಾ ಮಂಡಳಿಯ ವತಿಯಿಂದ ಯಕ್ಷ-ಗಾನ-ಹಾಸ್ಯ ವೈಭವ, ರಾತ್ರಿ 10.00ರಿಂದ ಪಿಂಗಾರ ಕಲಾವಿದರು ಬೆದ್ರ ತಂಡದಿAದ ‘ಓಂಕಾರ’ ನಾಟಕ ನಡೆಯಲಿದೆ.

ಬ್ರಹ್ಮಕಲಶೋತ್ಸವದ ಅಂಗವಾಗಿ ದೇವಸ್ಥಾನದ ಪ್ರಾಂಗಣಕ್ಕೆ ಹಾಸುಕಲ್ಲು, ಪುರಸಭೆಯ ಅನುದಾನದಿಂದ ಮೇಲ್ಛಾವಣಿ, ದಾನಿಗಳ ನೆರವಿನಿಂದ ತೀರ್ಥ ಬಾವಿ, ಸ್ವಾಗತ ಗೋಪುರ ನಿರ್ಮಿಸಲಾಗಿದೆ.

LEAVE A REPLY

Please enter your comment!
Please enter your name here