ಬಂಟ್ವಾಳ : ಬಂಟ್ವಾಳ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮ ಮಾರ್ಚ್ 4 ಬುಧವಾರ ಜರಗಿತು.

ಬಂಟ್ವಾಳ ಸಮೂಹ ಸಂಪನ್ಮೂಲ ಕೇಂದ್ರದ ಐ ಆರ್ ಟಿ ಸುರೇಖಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿ ವಿಜ್ಞಾನದ ಕುರಿತು ಆಸಕ್ತಿಯನ್ನು ಅಭಿವೃದ್ಧಿಪಡಿಸಲು, ಪ್ರಾಯೋಗಿಕತ್ಮಕ ಚಿಂತನೆಯನ್ನು ಬೆಳೆಸುವುದು, ಮೂಡನಂಬಿಕೆಗಳನ್ನು ಹೋಗಲಾಡಿಸಿ ವೈಜ್ಞಾನಿಕ ಚಿಂತನೆ ಮತ್ತು ಸಮಸ್ಯೆಗಳನ್ನು ಬಗೆಹರಿಸುವ ಸಾಮರ್ಥ್ಯವನ್ನು ಬೆಳೆಸುವ ಸಲುವಾಗಿ ವಿಜ್ಞಾನದ ದಿನಾಚರಣೆ ನಡೆಸುವ ಮೂಲಕ ವಿದ್ಯಾರ್ಥಿಗಳಲ್ಲಿ ತಾರ್ಕಿಕ ಚಿಂತನೆ ಬೆಳೆಯಲು ಸಹಾಯವಾಗುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರವಿ ಅಂಚನ್ ವಹಿಸಿದ್ದರು.

ಈ ಸಂದರ್ಭದಲ್ಲಿ ಸೈಹಾದ್ರಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾದ ರಂಜಿತ್, ಕ್ರತಿಕ್ ತಾವೇ ತಯಾರಿಸಿದ ಡ್ರೋನ್ ಹಾರಾಟ ಪ್ರದರ್ಶಿಸಿ ಮಕ್ಕಳು ಪ್ರಾಥಮಿಕ ಹಂತದಲ್ಲಿ ವಿಜ್ಞಾನ ಕ್ಷೇತ್ರ ಬಗ್ಗೆ ಒಲವು ತೋರಿಸುವಂತೆ ಪ್ರೇರೇಪಿಸಿದರು.
ವೇದಿಕೆಯಲ್ಲಿ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಅಟಲ್ ಟಿಂಕರಿಂಗ್ ಲ್ಯಾಬ್ ಸಂಯೋಜಕಿ ರೋಹಿಣಿ, ಶಾಲಾ ತಾಯಂದಿರ ಸಮಿತಿ ಅಧ್ಯಕ್ಷೆ ಉಷಾಲಾಕ್ಷಿ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರುಗಳಾದ ಕಮಲಾಕ್ಷ, ದಾಮೋದರ,ನವೀನ್, ಕೇಶವ ದಿವ್ಯ, ಪ್ರಿಯಾ,ಬಿಸಿ ರೋಡ್ ಕಾರ್ಮೆಲ್ ಶಾಲಾ ಶಿಕ್ಷಕ ರೋಷನ್, ಉಪಸ್ಥಿತರಿದ್ದರು.
ಬಂಟ್ವಾಳ ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ಜಯರಾಮ್, ವಿಜಯವಾಣಿ ಪತ್ರಿಕಾ ಕಚೇರಿ ಸಿಬ್ಬಂದಿಗಳಾದ ಸೂರಾಜ್, ಗಣೇಶ್ ಬೋಳಾರ, ಗಿರೀಶ್ ಬಂಟ್ವಾಳ, ಮಕ್ಕಳ ಪೋಷಕರು ಭೇಟಿ ನೀಡಿ ಪ್ರೋತ್ಸಾಹಿಸಿದರು.
ಪ್ರಭಾರ ಮುಖ್ಯ ಶಿಕ್ಷಕಿ ಸುಜಾತ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕಿ ಶೋಭಾ ವಂದಿಸಿದರು. ಶಿಕ್ಷಕಿ ದೀಪಿಕಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಶಿಕ್ಷಕಿಯರು ಸಹಕರಿಸಿದರು

