ಇಲಿ ಪಾಷಾಣ ಸೇವಿಸಿ ನರ್ಸಿಂಗ್‌ ವಿದ್ಯಾರ್ಥಿನಿ ಆತ್ಮಹತ್ಯೆ

0
45

ಉಡುಪಿ : ಇಲಿ ಪಾಷಾಣ ಸೇವಿಸಿ ನರ್ಸಿಂಗ್‌ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಕಡಬ ಮೂಲದ ಸ್ವೀಟಿ (18) ಮೃತರು.

ಆಸ್ಪತ್ರೆಯ ವಸತಿ ನಿಲಯದಲ್ಲಿ ತರಗತಿ ಮುಗಿದ ಅನಂತರ ಉಳಿದುಕೊಳ್ಳುತ್ತಿದ್ದು, ಫೆ. 25ರಂದು ರಾತ್ರಿ 9.15ರ ಸುಮಾರಿಗೆ ವಸತಿ ನಿಲಯದಲ್ಲಿರುವಾಗ ಇಲಿ ಪಾಷಣಾ ಸೇವನೆ ಮಾಡಿದ್ದರು. ಬಳಿಕ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಫೆ. 28ರಂದು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಾ. 3ರಂದು ಕೊನೆಯುಸಿರೆಳೆದಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here