ದಾವಣಗೆರೆ : ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಮತ್ತು ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಮಾ.15 ರಂದು ಭಾನುವಾರ ಬೆಳಿಗ್ಗೆ 10.30ಕ್ಕೆ ದಾವಣಗೆರೆಯ ವಿದ್ಯಾನಗರ ರಸ್ತೆಯಲ್ಲಿರುವ ಕುವೆಂಪು ಕನ್ನಡ ಭವನದಲ್ಲಿ ನಲ್ಲೂರು ಲಕ್ಷö್ಮಣ್ರಾವ್ರವರು ಸೃಷ್ಟಿಸಿದ “ಆಧ್ಯಾತ್ಮಿಕ ಸುಭಾಷಿತ” ಪುಸ್ತಕ ಲೋಕಾರ್ಪಣೆಯಾಗಲಿದೆ ಎಂದು ಕಲಾಕುಂಚದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.
ಪುಸ್ತಕ ಲೋಕಾರ್ಪಣೆಯನ್ನು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಬಿ. ವಾಮದೇವಪ್ಪ ನೆರವೇರಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಕಲಾಕುಂಚದ ಅಧ್ಯಕ್ಷರಾದ ವಾಸುದೇವ ಲಕ್ಷ್ಮ ಣ್ರಾವ್ ರಾಯ್ಕರ್ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ದಾವಣಗೆರೆಯ ಪ್ರೇಮಾ ಅರುಣಾಚಲ ಎನ್. ರೇವಣಕರ್ ಪ್ರತಿಷ್ಠಾನದ ಸಂಸ್ಥಾಪಕರಾದ ಡಾ. ನಲ್ಲೂರು ಅರುಣಾಚಲ ಎನ್.ರೇವಣಕರ್, ಕಲಾಕುಂಚದ ಮಾಜಿ ಗೌರವ ಅಧ್ಯಕ್ಷರಾದ ನಲ್ಲೂರು ಲಕ್ಷ್ಮ ಣ್ರಾವ್, ದಾವಣಗೆರೆಯ ರೇವಣಕರ್ ಪರಿವಾರದ ನೂತನ ಅಧ್ಯಕ್ಷರಾದ ಮಂಜುನಾಥ್ ರೇವಣಕರ್, ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಜ್ಯೋತಿ ಗಣೇಶ್ ಶೆಣೈ, ಕಲಾಕುಂಚ ಮಹಿಳಾ ವಿಭಾಗದ ಅಧ್ಯಕ್ಷರಾದ ಹೇಮಾ ಶಾಂತಪ್ಪ ಪೂಜಾರಿ ಆಗಮಿಸಲಿದ್ದಾರೆ ಎಂದು ಕಲಾಕುಂಚದ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ಪ್ರಕಟಿಸಿದ್ದಾರೆ.
ಸಾರ್ವಜನಿಕರಿಗೆ, ಮಕ್ಕಳಿಗೆ ಅಂದು ಬೆಳಗ್ಗೆ 9 ಗಂಟೆಯಿಂದ ಉಚಿತವಾಗಿ ಆಟೋಟ ಸ್ಪರ್ಧೆ, ರಸಪ್ರಶ್ನೆ ಮುಂತಾದ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ ಸಾಹಿತ್ಯಾಸಕ್ತರು, ಉಚಿತ ಈ ಸ್ಪರ್ಧೆಗಳಲ್ಲಿ ಭಾಗವಿಸುವವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಪುಸ್ತಕ ಲೋಕಾರ್ಪಣೆ ಸಮಾರಂಭವನ್ನು ಯಶಸ್ವಿಗೊಳಿಸಬೇಕಾಗಿ ಕಲಾಕುಂಚ ಮಹಿಳಾ ವಿಭಾಗದ ಪ್ರಥಮ ಅಧ್ಯಕ್ಷರಾದ ಚಂದ್ರಶೇಖರ ಅಡಿಗರವರು ವಿನಂತಿಸಿದ್ದಾರೆ.

