ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಲಾಂಛನ ಅನಾವರಣ

0
10


ಉಡುಪಿ: ಬನ್ನಂಜೆಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಪೂರ್ವಭಾವಿ ಲಾಂಛನ ಅನಾವರಣ ಕಾರ್ಯಕ್ರಮ ಗುರುವಾರ ದೇವಸ್ಥಾನದ ಆವರಣದಲ್ಲಿ ನೆರವೇರಿತು.
ಉಡುಪಿ ಶಾಸಕ ಯಶಪಾಲ್ ಸುವರ್ಣ ಲಾಂಛನ ಅನಾವರಣಗೊಳಿಸಿ ಮಾತನಾಡಿ, ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಸರ್ವ ಭಕ್ತರ ಸಹಕಾರದೊಂದಿಗೆ ಐತಿಹಾಸಿಕವಾಗಿ ಮೂಡಿಬರಲಿ ಎಂದು ಅವರು ಹಾರೈಸಿದರು.
ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ. ಎ. ಗಫೂರ್​, ಮಾಜಿ ಶಾಸಕ ಕೆ. ರಘುಪತಿ ಭಟ್​, ಉದ್ಯಮಿ ಅಜಯ್​ ಪುರುಷೋತ್ತಮ ಶೆಟ್ಟಿ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್​ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉದ್ಯಮಿ ನಾಗರಾಜ ಸುವರ್ಣ, ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ರಮೇಶ್​ ಕಾಂಚನ್​, ಪ್ರಧಾನ ತಂತ್ರಿ ಶಶಿಕಾಂತ್​ ತಂತ್ರ, ಪ್ರಮುಖರಾದ ಪ್ರಭಾಕರ ಪೂಜಾರಿ, ಗೋಪಾಲ ಬಂಗೇರ, ವಾಣಿ ವಿ. ರಾವ್​ ಉಪಸ್ಥಿತರಿದ್ದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಾಧವ ಬನ್ನಂಜೆ ಸ್ವಾಗತಿಸಿದರು. ಕೃತಿ ಮೂಡುಬೆಟ್ಟು ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here