ಮಾ.15 ರಂದು ಶ್ರೀ ಗಾಯತ್ರಿ ಪರಿವಾರದ ಸರ್ವ ಸದಸ್ಯರ ಮಹಾಸಭೆ

0
14

ದಾವಣಗೆರೆ : ದಾವಣಗೆರೆಯ ಶ್ರೀ ಗಾಯತ್ರಿ ದೇವಿಯ ಉಪಾಸಕರ ಕ್ರಿಯಾತ್ಮಕ ಸಂಸ್ಥೆ ಆಧ್ಯಾತ್ಮಿಕ ಸಂಸ್ಥೆ ಶ್ರೀ ಗಾಯತ್ರಿ ಪರಿವಾರದಿಂದ ಮಾರ್ಚ್ 5 ರಂದು ಭಾನುವಾರ ಸಂಜೆ 5 ಗಂಟೆಗೆ ನಗರದ ಕೆ.ಬಿ. ಬಡಾವಣೆಯ ಕುವೆಂಪು ರಸ್ತೆಯಲ್ಲಿರುವ ಕಲಾಕುಂಚ ಕಛೇರಿ ಸಭಾಂಗಣದಲ್ಲಿ ಸರ್ವ ಸದಸ್ಯರ ಮಹಾಸಭೆಯನ್ನು ಕರೆಯಲಾಗಿದೆ ಎಂದು ಪರಿವಾರದ ಪ್ರಧಾನ ಕಾರ್ಯದರ್ಶಿ ಸಾಲಿಗ್ರಾಮ ಗಣೇಶ್‌ಶೆಣೈ ತಿಳಿಸಿದ್ದಾರೆ.

ಈ ಮಹಾಸಭೆಯ ಅಧ್ಯಕ್ಷತೆಯನ್ನು ಶ್ರೀ ಗಾಯತ್ರಿ ಪರಿವಾರದ ಅಧ್ಯಕ್ಷರಾದ ಡಾ. ರಮೇಶ್ ಪಟೇಲ್ ವಹಿಸಿಕೊಳ್ಳಲಿದ್ದಾರೆ. ಈ ಸಭೆಯಲ್ಲಿ 2026-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ, ಲೆಕ್ಕಪತ್ರ ಮಂಡನೆ, ವಾರ್ಷಿಕ ವರದಿ ಮುಂತಾದ ಚಟುವಟಿಕೆಗಳು ನಡೆಯುತ್ತದೆ.

ಈ ಆಧ್ಯಾತ್ಮಿಕ ಪರಂಪರೆಯ ಅಭಿಮಾನಿಗಳಾದ ಶ್ರೀ ಗಾಯತ್ರಿ ಪರಿವಾರದ ಸರ್ವ ಸದಸ್ಯರು, ಪದಾಧಿಕಾರಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಮಹಾಸಭೆಯನ್ನು ಯಶಸ್ವಿಗೊಳಿಸಬೇಕಾಗಿ ಪರಿವಾರದ ಖಜಾಂಚಿ ಪುರುಷೋತ್ತಮ ಪಟೇಲ್ ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here