ಬ್ರಹ್ಮಾವರ ತಾಲೂಕಿನ ಚೇರ್ಕಾಡಿಯ ರಾಷ್ಟ್ರೋತ್ಥಾನ ಶಾಲೆಗೆ ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಭೇಟಿ ಮಾಡಲಾಯಿತು.
ವಿದ್ಯಾಭಾರತಿ ಕರ್ನಾಟಕ ಪ್ರಾಂತ ಉಪಾಧ್ಯಕ್ಷರು ಗುರುದಾಸ ಶೆಣೈ ಹೆಬ್ರಿ , ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲಾಧ್ಯಕ್ಷರು ಪಾಂಡುರಂಗ ಪೈ ಸಿದ್ಧಾಪುರ , ಕಾರ್ಯದರ್ಶಿ ಮಹೇಶ ಹೈಕಾಡಿ ಭೇಟಿ ನೀಡಿದರು.
ರಾಷ್ಟ್ರೋತ್ಥಾನ ಸಂಸ್ಥೆಯ ಆಡಳಿತಾಧಿಕಾರಿ ಸುರೇಶ್ ಹೆಜಮಾಡಿ , ಪ್ರಧಾನಾಚಾರ್ಯೆ ಪೂರ್ಣಿಮಾ ಎಸ್. ಡಿ. ಕಾಲೇಜು ವಿಭಾಗದ ಪ್ರಾಂಶುಪಾಲೆ ಭಾಗ್ಯಲಕ್ಷೀ ಉಪಸ್ಥಿತರಿದ್ದರು. ಸಂಸ್ಥೆಯ ಶೈಕ್ಷಣಿಕ ಚಟುವಟಿಕೆಗಳನ್ನು ,ಆಡಳಿತ ಅಭಿವೃದ್ಧಿ ಯೋಜನೆಯನ್ನು ಪರಿಚಯಿಸಿದರು.

