ಮಣಿಪುರ : ಕ್ಷುಲ್ಲಕ ಕಾರಣಕ್ಕೆ ವೃದ್ಧೆಯ ಕೊಲೆ – ಇಬ್ಬರ ಸೆರೆ

0
128

ಉಡುಪಿ : ತಾಲೂಕಿನ ಮಣಿಪುರ ಗ್ರಾಮದ ಅರಬಿ ಕೆನರಾಡಿ ಎಂಬಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಉಂಟಾದ ಜಗಳದ ಹಿನ್ನೆಲೆಯಲ್ಲಿ 60 ವರ್ಷದ ವೃದ್ಧೆಯನ್ನು ಹರಿತವಾದ ಆಯುಧದಿಂದ ಕೊಚ್ಚಿ ಕೊಲೆ ಮಾಡಿರುವ ಭೀಬತ್ಸ ಘಟನೆ ನಡೆದಿದೆ. ವನಜಾ ಪೂಜಾರ್ತಿ (60) ಕೊಲೆಯಾದ ದುರ್ದೈವಿ.

ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ನಿವಾಸಿಗಳಾದ ವಲೇರಿಯನ್ ಮೆಂಡೋನ್ಸಾ ಮತ್ತು ಪ್ರವೀಣ್ ಮೆಂಡೋನ್ಸಾ ಎಂಬುವವರನ್ನು ಕಾಪು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಗಳಾದ ವಲೇರಿಯನ್ ಮತ್ತು ಪ್ರವೀಣ್ ಪರಸ್ಪರ ಸಂಬಂಧಿಕರಾಗಿದ್ದು (ಚಿಕ್ಕಪ್ಪ-ದೊಡ್ಡಪ್ಪನ ಮಕ್ಕಳು), ಇವರು ಮೃತ ವನಜಾ ಪೂಜಾರ್ತಿ ಅವರೊಂದಿಗೆ ಆಗಾಗ ಮದ್ಯಪಾನ ಮಾಡುತ್ತಿದ್ದರು ಎನ್ನಲಾಗಿದೆ. ಮಾರ್ಚ್ 9ರ ಸಂಜೆ 5 ಗಂಟೆಯಿಂದ ಮಾರ್ಚ್ 10ರ ಬೆಳಿಗ್ಗೆ 7 ಗಂಟೆಯ ಅವಧಿಯಲ್ಲಿ ಇವರ ನಡುವೆ ಯಾವುದೋ ಕ್ಷುಲ್ಲಕ ವಿಚಾರಕ್ಕೆ ಜಗಳ ನಡೆದಿದೆ. ಈ ವೇಳೆ ಆಕ್ರೋಶಗೊಂಡ ಆರೋಪಿಗಳು ಹರಿತವಾದ ಆಯುಧದಿಂದ ವನಜಾ ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

LEAVE A REPLY

Please enter your comment!
Please enter your name here