ಉಡುಪಿ : ಅಭಿವೃದ್ಧಿಯಲ್ಲಿ ಮಹಿಳೆಯರ ಕೊಡುಗೆ ಅಪಾರ : ಯಶ್‌ಪಾಲ್ ಸುವರ್ಣ

0
11

ಉಡುಪಿ : ಉಡುಪಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಮಹಿಳೆಯರ ಕೊಡುಗೆ ಅಪಾರವಾಗಿದ್ದು, ಉಡುಪಿ ಜಿಲ್ಲೆಯ ಲಿಂಗಾನುಪಾತ ಪ್ರಮಾಣದಲ್ಲಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನಿಯಾಗಿದೆ. ಜಿಲ್ಲೆಯ ಆಡಳಿತ ವ್ಯವಸ್ಥೆಯಲ್ಲಿ ಹಲವಾರು ಮಂದಿ ಮಹಿಳಾ ಉಸ್ತುವಾರಿ ಸಚಿವರು, ಮಹಿಳಾ ಜಿಲ್ಲಾಧಿಕಾರಿ, ಸಂಸದರೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಹಾಗೂ ತಾಪಂ ಅಧ್ಯಕ್ಷರಾಗಿ ಸೇವೆ ಸಲ್ಲಿಸುವ ಮೂಲಕ ಜಿಲ್ಲೆಯ ಪ್ರಗತಿ ಅಪಾರ ಕೊಡುಗೆ ನೀಡಿದ್ದಾರೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ.

ಉಡುಪಿ ನಗರ ಬಿಜೆಪಿ ಹಾಗೂ ಮಹಿಳಾ ಮೋರ್ಚಾದ ವತಿಯಿಂದ ಆಯೋಜಿಸಲಾದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಮುಖ್ಯ ಅತಿಥಿಯಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದು ಮಹಿಳೆಯರಾದ ಶಕುಂತಲಾ ಶೆಟ್ಟಿ(ಹೈನುಗಾರಿಕೆ), ವಿಮಲ (ಸಂಜೀವಿನಿ ಗ್ರೂಪ್), ಅನುಷಾ (ವಕೀಲರು), ಸುಶೀಲ ಸಾಲಿಯಾನ್(ಮಹಿಳಾ ಹೋಮ್ ಗಾರ್ಡ್), ಗೀತಾ ಕೃಷ್ಣರಾಜ್(ಆಟೋ ಚಾಲಕಿ), ಲಲಿತ(ಪೌರ ಕಾರ್ಮಿಕರು) ಹಾಗೂ ಸಮಾಜ ಸೇವಕರಾದ ನಿತ್ಯಾನಂದ ಒಳಕಾಡು, ವಿಶು ಶೆಟ್ಟಿ ಅಂಬಲಪಾಡಿ, ಸತೀಶ್ ಸಾಲ್ಯಾನ್ ಮಣಿಪಾಲ ಹಾಗೂ ಪರ್ಕಳದ ಮನೆ ಊಟ ಹೋಟೆಲ್‌ನ ಹಿರಿಯ ದಂಪತಿ ಗೋಪಾಲಕೃಷ್ಣ ಮತ್ತು ವಸಂತಿ ಅವರನ್ನು ಸನ್ಮಾನಿಸಲಾಯಿತು.

ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಪಕ್ಷದ ಮುಖಂಡ ರಾದ ಕಿದಿಯೂರು ಉದಯ ಕುಮಾರ್ ಶೆಟ್ಟಿ, ಉಡುಪಿ ನಗರ ಮಂಡಲದ ಅಧ್ಯಕ್ಷ ದಿನೇಶ್ ಅಮಿನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ್ ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷ ಸಂಧ್ಯಾ ರಮೇಶ್, ನಗರ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಾಂತಿ ಮನೋಜ್ ಮೊದಲಾದವರು ಉಪಸ್ಥಿತರಿದ್ದರು.

ಸಂತೆಕಟ್ಟೆ ವಾತ್ಸಲ್ಯ ಕ್ಲಿನಿಕ್‌ನನ ಡಾ.ರಾಜಲಕ್ಷ್ಮಿ ಮಹಿಳೆಯರಿಗಾಗಿ ವಿಶೇಷ ಉಪಯುಕ್ತ ಆರೋಗ್ಯ ಮಾಹಿತಿ ನೀಡಿದರು. ಮಹಿಳಾ ಮೋರ್ಚಾದ ಅಧ್ಯಕ್ಷೆ ನೀತಾಪ್ರಭು ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಬಳಿಕ ಮಹಿಳೆಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

LEAVE A REPLY

Please enter your comment!
Please enter your name here