ಬಂಟ್ವಾಳ : ಇಲ್ಲಿನ ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾ.20ರಂದು ರಾಷ್ರ್ಟೀಯ ವಿಚಾರ ಸಂಕಿರಣ ಕಾರ್ಯಕ್ರಮ ನಡೆಯಲಿದೆ.
‘ವಸಾಹತು ಮನೋಭಾವದಿಂದ ಭಾರತೀಯತೆಯೆಡೆಗೆ ಒಂದು ಚಿಂತನೆ’ ವಿಷಯಕ್ಕೆ ಸಂಬಂಧಿಸಿದಂತೆ ನಡೆಯುವ ಈ ಕಾರ್ಯಕ್ರಮಕ್ಕೆ ಹಿರಿಯ ಪತ್ರಕರ್ತ ರಂಗನಾಥ್ ಭಾರದ್ವಾಜ್ ಚಾಲನೆ ನೀಡುವರು.
ಸಂಸ್ಥೆ ಅಧ್ಯಕ್ಷ ಬಿ.ನಾರಾಯಣ ಸೋಮಯಾಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಸಂಸ್ಥೆ ಮುಖ್ಯಸ್ಥ ಡಾ.ಕೆ.ಪ್ರಭಾಕರ ಭಟ್ ಪ್ರಾಸ್ತಾವಿಕ ಮಾತನಾಡುವರು.
ಉಳಿದಂತೆ ವಿವಿಧ ಗೋಷ್ಠಿಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪ್ರಾಧ್ಯಾಪಕಿ ಡಾ.ಆರತಿ ವಿ.ಬಿ., ಮಾಜಿ ಶಾಸಕ ರಾಜೀವ ಕುಡಜಿ, ಚಿಂತಕ ರೋಹಿತ್ ಚಕ್ರತೀರ್ಥ, ರಘುನಂದನ್ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
