ಉಡುಪಿ : ಕಾನೂನು ಸುವ್ಯವಸ್ಥೆ ಕಾಪಾಡಲು ಮೂವರು ರೌಡಿಗಳಿಗೆ ಗಡಿಪಾರು ಆದೇಶ

0
61

ಉಡುಪಿ : ಮೂವರು ರೌಡಿ ಶೀಟರ್‌ಗಳಿಗೆ ಗಡಿಪಾರು ಆದೇಶ ಜಾರಿಗೊಳಿಸಲಾಗಿದೆ. ಕಾಪು ತಾಲೂಕಿನ ನಡ್ಸಾಲು ಗ್ರಾಮದ ಜಬ್ಬಾರ್ ಹುಸೇನ್, ಹಿರಿಯಡಕ ಬೊಮ್ಮರಬೆಟ್ಟು ಗ್ರಾಮದ ಸಂದೇಶ್ ಹಾಗೂ ಹಿರಿಯಡಕ ದರ್ಖಾಸು ಪಾಪುಜೆ ನಿವಾಸಿ ಸುಶಾಂತ್ ಅವರ ವಿರುದ್ಧ ಗಡಿಪಾರು ಆದೇಶ ಹೊರಡಿಸಲಾಗಿದ್ದು, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ವಿಶೇಷ ಕಾರ್ಯಾಂಗ ದಂಡಾಧಿಕಾರಿಗಳು ಮಾ.12ರಂದು ಗಡಿಪಾರು ಆದೇಶ ಹೊರಡಿಸಿದ್ದಾರೆ.

ಜಬ್ಬಾರ್ ಹುಸೇನ್ ವಿರುದ್ಧ ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳು ಹಾಗೂ ಮಂಗಳೂರು ನಗರದಲ್ಲಿ ಒಟ್ಟು 16 ಪ್ರಕರಣಗಳು ದಾಖಲಾಗಿದೆ, ರೌಡಿ ಶೀಟರ್ ತೆರೆಯಲಾಗಿದೆ. ಸಂದೇಶ್ ವಿರುದ್ಧ ಐದು ಪ್ರಕರಣಗಳು ದಾಖಲಾಗಿವೆ, ರೌಡಿ ಶೀಟರ್ ತೆರೆಯಲಾಗಿದೆ. ಸುಶಾಂತ್ ವಿರುದ್ಧ ಮೂರು ಪ್ರಕರಣಗಳು ದಾಖಲಾಗಿವೆ, ರೌಡಿ ಶೀಟರ್ ತೆರೆಯಲಾಗಿದೆ.

ಜಬ್ಬಾರ್ ಹುಸೇನ್ ನನ್ನು ಹಾಸನ ಜಿಲ್ಲೆಯ ಪೆನ್ಷನ್ ಮೊಹಲ್ಲಾ ಠಾಣಾ ವ್ಯಾಪ್ತಿಗೆ, ಸಂದೇಶ್ ನನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗೆ ಹಾಗೂ ಸುಶಾಂತ್ ನನ್ನು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.

LEAVE A REPLY

Please enter your comment!
Please enter your name here