ಚಿಕ್ಕಮಗಳೂರು : ಜೇನುಹುಳಗಳ ದಾಳಿಗೆ ರೈತ ಬಲಿ

0
27

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಜೇನುಹುಳಗಳ ದಾಳಿಗೆ ರೈತರೊಬ್ಬರು ಬಲಿಯಾಗಿದ್ದಾರೆ.

ಸಖರಾಯಪಟ್ಟಣ ನಿವಾಸಿ ಕರಿಯಾನಾಯ್ಕ(61) ಮೃತಪಟ್ಟವರು. ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆಯಲ್ಲಿ ಕರಿಯಾನಾಯ್ಕ ಅವರ ಮೇಲೆ ಜೇನು ಹುಳಗಳು ದಾಳಿ ಮಾಡಿವೆ. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ಕೂಡಲೇ ಸಖರಾಯಪಟ್ಟಣದ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ಅವರ ಪರಿಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಚಿಕ್ಕಮಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯದಲ್ಲಿ ಸಾವನಪ್ಪಿದ್ದಾರೆ.

LEAVE A REPLY

Please enter your comment!
Please enter your name here