25 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಮೂಡುತೋನ್ಸೆ ಗರಡಿಹಿತ್ಲು ರಸ್ತೆ ಶಾಸಕ ಯಶ್ ಪಾಲ್ ಸುವರ್ಣ ಲೋಕಾರ್ಪಣೆ.

0
12

ಸುಮಾರು 25 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಡುತೋನ್ಸೆ ಗರಡಿಹಿತ್ಲು ಸಂಪರ್ಕ ರಸ್ತೆಯನ್ನು ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಸ್ಥಳೀಯ ಮುಖಂಡರ ಉಪಸ್ಥಿತಿಯಲ್ಲಿ ಉದ್ಘಾಟಿಸಿದರು.

ನೂತನ ರಸ್ತೆಯ ಉದ್ಘಾಟನೆ ನೆರವೇರಿಸಿದ ಶಾಸಕ ಯಶ್ ಪಾಲ್ ಸುವರ್ಣ ಮಾತನಾಡಿ ಮೂಡುತೋನ್ಸೆ ಗರಡಿಹಿತ್ಲು ಭಾಗದ ಜನತೆಯ ಬಹು ವರ್ಷಗಳ ಬೇಡಿಕೆಯಾಗಿದ್ದ ರಸ್ತೆ ಕಾಮಗಾರಿಗೆ 25 ಲಕ್ಷ ಅನುದಾನ ಒದಗಿಸಿ ಇದೀಗ ರಸ್ತೆ ಲೋಕಾರ್ಪಣೆಗೊಂಡಿದೆ. ಈ ಭಾಗದಲ್ಲಿ ನಿರ್ಮಾಣಗೊಳ್ಳುತ್ತಿರುವ ತೋನ್ಸೆ ವಲಯ ಬಂಟರ ಸಂಘದ ನೂತನ ಬಂಟರ ಭವನಕ್ಕೆ ಆಗಮಿಸುವ ಸಾರ್ವಜನಿಕರಿಗೂ ಇದರಿಂದ ಅನುಕೂಲವಾಗಲಿದ್ದು, ಕಲ್ಯಾಣಪುರ ಗ್ರಾಮದ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಮುತುವರ್ಜಿವಹಿಸುದಾಗಿ ಹೇಳಿದರು.

ಸಮಾರಂಭದಲ್ಲಿ ಉಪಸ್ಥಿತರಿದ್ದ
ತೋನ್ಸೆ ವಲಯ ನಾಡವರ ಸಂಘದ ಅಧ್ಯಕ್ಷರಾದ ಶ್ರೀ ಮನೋಹರ ಶೆಟ್ಟಿ ತೋನ್ಸೆ ಮಾತನಾಡಿ, ನಮ್ಮ ಬೇಡಿಕೆಗೆ ಅತ್ಯಂತ ಶೀಘ್ರವಾಗಿ ಸ್ಪಂದಿಸಿ ಗರಡಿಹಿತ್ಲು ಭಾಗಕ್ಕೆ ರಸ್ತೆ ನಿರ್ಮಿಸಿ ವಿಶೇಷ ಸಹಕಾರ ನೀಡಿದ ಶಾಸಕ ಯಶ್ ಪಾಲ್ ಸುವರ್ಣ ಅವರಿಗೆ ಊರಿನ ಜನತೆ ಹಾಗೂ ಬಂಟರ ಸಂಘದ ಪರವಾಗಿ ಧನ್ಯವಾದ ಸಲ್ಲಿಸುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ತೋನ್ಸೆ ವಲಯ ನಾಡವರ ಸಂಘದ ಕಾರ್ಯದರ್ಶಿ ಶ್ರೀ ಸತೀಶ್ ಶೆಟ್ಟಿ ಕೆಮ್ಮಣ್ಣು, ಕೋಶಾಧಿಕಾರಿ ಶ್ರೀ ದಿನಕರ ಶೆಟ್ಟಿ , ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಮಮತಾ ಶೆಟ್ಟಿ,ಮೂಡುತೋನ್ಸೆ ಕೂರಾಡಿ ಮನೆ ಶ್ರೀ ವಿಶ್ವನಾಥ್ ಶೆಟ್ಟಿ ಮುಂಬೈ, ಸದಾಶಿವ ಶೆಟ್ಟಿ ಗರಡಿಹಿತ್ಲು, ಕಲ್ಯಾಣಪುರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ ನಾಗರಾಜ್, ಶ್ರೀ ಸತೀಶ್ ನಾಯ್ಕ್, ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಶ್ರೀ ಪ್ರಶಾಂತ್ ಆಚಾರ್, ಅನಿತಾ ನಾಯ್ಕ್, ಕವಿತಾ ಮೇಸ್ತ, ಸುಧೀರ್ ಪೂಜಾರಿ ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here