ಗದಗ : ಹೋಳಿ ಹಬ್ಬದ ಬಳಿಕ ಕೆರೆಯಲ್ಲಿ ಈಜಲು ತೆರಳಿದ್ದ 16 ವರ್ಷದ ಬಾಲಕ ನೀರುಪಾಲಾಗಿರುವಂತಹ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಯಳವತ್ತಿ ಗ್ರಾಮದಲ್ಲಿ ನಡೆದಿದೆ. ದೇವೇಂದ್ರ ಮೃತ ಬಾಲಕ. ಸ್ಥಳೀಯರ ಸಹಾಯದಿಂದ ಬಾಲಕನ ಮೃತದೇಹವನ್ನು ಅಗ್ನಿಶಾಮಕ ಸಿಬ್ಬಂದಿ ಹೊರಗೆ ತೆಗೆದಿದ್ದಾರೆ. ಮಗನ ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲುಮುಟ್ಟಿದೆ. ಸದ್ಯ ಲಕ್ಷ್ಮೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.