ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮತ್ತು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಸಹಕಾರದೊಂದಿಗೆ ತಮಿಳು ಲೇಖಕರೊಂದಿಗೆ ಸಂವಾದ ಕಾರ್ಯಕ್ರಮ ಎ.18 ರಂದು 3.00 ಗಂಟೆಗೆ ಉರ್ವಸ್ಟೋರ್ ನ ತುಳು ಭವನದ ಸಿರಿಚಾವಡಿಯಲ್ಲಿ ನಡೆಯಲಿದೆ.
ತಮಿಳುನಾಡಿನಿಂದ ಆಗಮಿಸುವ ಲೇಖಕರ ತಂಡವು ತುಳು ಭವನಕ್ಕೆ ಭೇಟಿ ನೀಡಲಿದೆ. ಕಾರ್ಯಕ್ರಮದಲ್ಲಿ ತಾರಾನಾಥ್ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸಲಿದ್ದು, ಬ್ಯಾರಿ ಅಕಾಡೆಮಿ ಅಧ್ಯಕ್ಷರಾದ ಉಮರ್ ಯು ಹೆಚ್ ಹಾಗೂ ಕೊಂಕಣಿ ಅಕಾಡೆಮಿ ಸದಸ್ಯರಾದ ಸಮರ್ಥ್ ಭಟ್ ಇವರು ಉಪಸ್ಥಿತರಿರುವರು. ಪ್ರೊ. ಎಸ್ .ಎ ಕೃಷ್ಣಯ್ಯ ಜಾನಪದ ತಜ್ಞರು,ಸ್ಥಾಪಕ ಅಧ್ಯಕ್ಷರು, ಪ್ರಾಚ್ಯ ಸಂಚಯ ಸಂಶೋಧನಾ ಕೇಂದ್ರ ಉಡುಪಿ ಇವರು ತುಳುನಾಡು ಮತ್ತು ತಮಿಳುನಾಡಿನ ಭಾಂದವ್ಯ ಇತಿಹಾಸ ಮತ್ತು ಪರಂಪರೆ ಎಂಬ ವಿಷಯದ ಬಗ್ಗೆ ವಿಚಾರ ಮಂಡನೆ ನಡೆಸುವರು. ನಂತರ ತುಳು, ಬ್ಯಾರಿ ಮತ್ತು ಕೊಂಕಣಿ ಭಾಷೆಯ ಹಾಡು ಮತ್ತು ಭಾಷೆಗಳ ಬಗ್ಗೆ ಮಾಹಿತಿ ವಿನಿಮಯ ನಡೆಯಲಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.