ಅ 21 : ತುಳು ಅಕಾಡೆಮಿಯಿಂದ ದೀಪಾವಳಿ ಪರ್ಬದ ಐಸಿರ

0
28

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಮಂಗಳೂರಿನ ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ‘ದೀಪಾವಳಿ ಪರ್ಬದ ಐಸಿರ’ ಕಾರ್ಯಕ್ರಮ ಅ. 21 ರಂದು
ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಕಾರ್ಯಕ್ರಮದಲ್ಲಿ ದೀಪಾವಳಿ ಬಗ್ಗೆ ಉಪನ್ಯಾಸ, ಕವಿಗೋಷ್ಠಿ, ನೃತ್ಯ ಸಂಭ್ರಮ ಹಾಗೂ ಪದರಂಗಿತ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಹೊಂಬೆಳಕು ಶಿಕ್ಷಣ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಡಾ.ಕಿಶೋರ್ ಕುಮಾರ್ ರೈ ಶೇಣಿ ಅವರು ಉದ್ಘಾಟಿಸಿ, ತುಳುವರ ದೀಪಾವಳಿ ಆಚರಣೆಯ ಬಗ್ಗೆ ಉಪನ್ಯಾಸ
ನೀಡುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ವಹಿಸುವರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಜಗದೀಶ ಬಾಳ ಉಪಸ್ಥಿತರಿರವರು.
ಕವಿಗೋಷ್ಠಿಯಲ್ಲಿ ಅನಿತಾ ಪಿಂಟೋ, ಸೌಮ್ಯ ಪ್ರವೀಣ್, ಸುಲೋಚನಾ ನವೀನ್, ಶಮೀಮ್ ಕುಟ್ಟಿಕಳ ಭಾಗವಹಿಸುವರು. ಶ್ರೇಯ ಮತ್ತು ವಂಶಿ ಬಳಗದವರಿಂದ ನೃತ್ಯ ಸಂಭ್ರಮ ಹಾಗೂ ಪದರಂಗಿತ
ಕಾರ್ಯಕ್ರಮ ನಡೆಯಲಿದೆ ಎಂದು ಅಕಾಡೆಮಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here