ಮಂಗಳೂರು : ಇತ್ತೀಚೆಗೆ ನಿಧನರಾದ ಯಕ್ಷಗಾನ ರಂಗದ ಹಾಗೂ ನಾಟಕ ಕ್ಷೇತ್ರದ ಹಿರಿಯ ಮೇರು ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಅವರಿಗೆ ಶೃದ್ಧಾಂಜಲಿ ಸಲ್ಲಿಸುವ ನುಡಿ ನಮನದ ಸಭೆಯು ಅ.25 (ಶುಕ್ರವಾರ) ರಂದು ಸಂಜೆ 4.00 ಗಂಟೆಗೆ ಮಂಗಳೂರು ಉರ್ವಾಸ್ಟೋರ್ ನಲ್ಲಿರುವ ತುಳು ಅಕಾಡೆಮಿಯ ತುಳು ಭವನದಲ್ಲಿ ನಡೆಯಲಿದೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಕರ್ನಾಟಕ ಯಕ್ಷಗಾನ ಅಕಾಡೆಮಿ, ಯಕ್ಷ ದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಈ ಸಭೆಯನ್ನು ಆಯೋಜಿಸಿದೆ ಎಂದು ಪ್ರಕಟಣೆ ತಿಳಿಸಿದೆ.