ಎ. 26 : ಕೆ. ಟಿ.  ಆಳ್ವರಿಗೆ ತುಳು ಅಕಾಡೆಮಿಯ ಚಾವಡಿ ತಮ್ಮನ

0
229

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ಹಿರಿಯ ತುಳು ಸಾಹಿತಿ ನಿವೃತ್ತ ಉಪನ್ಯಾಸಕ ಕೆ. ಟಿ. ಆಳ್ವ ಅವರಿಗೆ ಚಾವಡಿ ತಮ್ಮನದ ಗೌರವ ಸಮರ್ಪಣೆಯ ಕಾರ್ಯಕ್ರಮ ಏಪ್ರಿಲ್ 26ರಂದು ಸಂಜೆ  4.00 ಗಂಟೆಗೆ ಮುಡಿಪು ಪಜೀರು ಗ್ರಾಮದ ರಾಮ್ ಬಾಗ್ ನಲ್ಲಿ ನಡೆಯಲಿದೆ.

ಸುದೀರ್ಘ ಕಾಲ ಸರಕಾರಿ ಪ.ಪೂ. ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ  ಕುದ್ರೆಪ್ಪಾಡಿ ತಿಮ್ಮಣ್ಣ ಆಳ್ವ (ಕೆ.ಟಿ ಆಳ್ವ) ಅವರು ‘ತುಳುನಾಡ್ದ ತುಡರ್’ ಮತ್ತು ‘ತುಳು ಭಾಷೆದ ತಿರ್ಲ್ ‘ ಎಂಬ ಕೃತಿಯನ್ನು ಹೊರ ತಂದಿದ್ದಾರೆ. ತುಳು ಸಂಸ್ಕೃತಿ, ಭಾಷೆ, ಜನಪದ ವಿಚಾರಕ್ಕೆ ಸಂಬಂಧಪಟ್ಟ ಹಾಗೆ ಅನೇಕ ಲೇಖನಗಳನ್ನು ಪ್ರಕಟಿಸಿದ್ದಾರೆ.

ಮುಡಿಪು ಸರಕಾರಿ ಪದವಿ ಪೂರ್ವ ಕಾಲೇಜು ಹಳೆ ವಿದ್ಯಾರ್ಥಿ ಬಳಗದ ಸಹಯೋಗದಲ್ಲಿ ನಡೆಯುವ ಈ ಚಾವಡಿ ತಮ್ಮನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಳು ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ  ಕಾಪಿಕಾಡ್ ವಹಿಸುವರು. ಪಜೀರ್ ಗ್ರಾಮ ಪಂಚಾಯತ್ ಅಧ್ಯಕ್ಷ  ರಫೀಕ್ ಪಜೀರ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಪತ್ರಕರ್ತ ಶಶಿಧರ ಪೊಯ್ಯತ್ತ ಬೈಲ್ ಅಭಿನಂದನಾ ಭಾಷಣ ಮಾಡುವರು ಎಂದು ತುಳು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here