ಕಟೀಲು : ಶ್ರೀ ಕೊಡಮಣಿತ್ತಾಯ ಕ್ಷೇತ್ರ ಶಿಬರೂರು ದೇಲಂತಬೆಟ್ಟು ಇಲ್ಲಿ ನಡೆಯುವ ಬ್ರಹ್ಮಕುಂಭಾಭಿಷೇಕ ಹಾಗೂ ನಾಗಮಂಡಲ ಸೇವೆ ಮತ್ತು ವಿಶೇಷ ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀ ಕ್ಷೇತ್ರದ ತಂತ್ರಿವರೇಣ್ಯರಾದ ಬ್ರಹ್ಮಶ್ರೀ ಶಿಬರೂರು ವೇದವ್ಯಾಸ ತಂತ್ರಿಗಳ ಆಚಾರ್ಯತ್ವದಲ್ಲಿ ಎ.3 ರಂದು ಬುಧವಾರ ಬೆಳಿಗ್ಗೆ 9.30 ಕ್ಕೆ ಚಪ್ಪರ ಮುಹೂರ್ತ ನಡೆಯಲಿದೆ. ಹಿರಿಯ ಧಾರ್ಮಿಕ ಮುಂದಾಳು ಶೆಡ್ಡೆ ಮಂಜುನಾಥ ಭಂಡಾರಿ ಅವರು ಚಪ್ಪರ ಮುಹೂರ್ತ ನೆರವೇರಿಸಲಿದ್ದಾರೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶ್ರೀ ಕ್ಷೇತ್ರದ ಪ್ರಕಟಣೆ ತಿಳಿಸಿದೆ.