ನವದೆಹಲಿ: ದೆಹಲಿಯ ಅಶೋಕ್ ವಿಹಾರ್‌ನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಮಹಿಳೆಯೊಬ್ಬರು ತನ್ನ ಐದು ವರ್ಷದ ಮಗಳನ್ನು ಉಸಿರುಗಟ್ಟಿಸಿ ಕೊಂದಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಸ್ನೇಹಿತರಾಗಿದ್ದ ವ್ಯಕ್ತಿಯನ್ನು ಆಕೆ ಮದುವೆಯಾಗಲು ಬಯಸಿದ್ದಳು. ಆದರೆ, ಆತ ಆಕೆಯ ಮಗಳನ್ನು ಸ್ವೀಕರಿಸಲು ಸಿದ್ಧನಿರಲಿಲ್ಲ. ಹೀಗಾಗಿ, ಆತನ ಜೊತೆ ಹೋಗುವ ಸಲುವಾಗಿ ತನ್ನ 5 ವರ್ಷದ ಮಗಳ ಕತ್ತು ಹಿಸುಕಿ ಕೊಂದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ದೀಪ್ ಚಂದ್ ಬಂಧು ಆಸ್ಪತ್ರೆಗೆ ಮಗುವನ್ನು ಕರೆದುಕೊಂಡು ಹೋದಾಗ ಮಗು ಸತ್ತಿದೆ ಎಂದು ಹೇಳಿದ್ದರು. ಈ ಬಗ್ಗೆ ಆಸ್ಪತ್ರೆಯವರು ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸ್ ಅಧಿಕಾರಿಗಳು ಶವದ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸಿದಾಗ, ಮಗುವಿನ ಕುತ್ತಿಗೆಯಲ್ಲಿ ಕತ್ತು ಹಿಸುಕಿದ ಗುರುತುಗಳು ಪತ್ತೆಯಾಗಿವೆ.