ಕೋಲಾರ: ಖಾಸಗಿ ಕಾಲೇಜು ವಿದ್ಯಾರ್ಥಿನಿ ವಸತಿ ನಿಲಯದಲ್ಲಿ ತಾನು ಮಲಗುವ ಮಂಚಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ಹೊರವಲಯದಲ್ಲಿರುವ ಖಾಸಗಿ ಕಾಲೇಜು ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದೆ.
ಬಿಂದುಶ್ರೀ (17) ಮೃತ ವಿದ್ಯಾರ್ಥಿನಿ. ಈಕೆ ಚಿಕ್ಕಬಳ್ಳಾಪುರ ಜಿಲ್ಲೆಯ ಗಂಗರೇಕಾಲುವೆ ಗ್ರಾಮದವಳಾಗಿದ್ದು, ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಹಾಸ್ಟೆಲ್‌ನ ಮಂಚದ ಕಂಬಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.