Tuesday, May 13, 2025
Homeಮಂಗಳೂರುಕಡಿದು ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಕಾಲೇಜು ವಿದ್ಯಾರ್ಥಿನಿ ಸಾವು

ಕಡಿದು ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಕಾಲೇಜು ವಿದ್ಯಾರ್ಥಿನಿ ಸಾವು

ಬಜಪೆ : ಕಡಿದು ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ ಘಟನೆ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಕಲ್ಲಕಲಂಬಿ ಎಂಬಲ್ಲಿ ಇಂದು ಮುಂಜಾನೆ ನಡೆದಿದೆ.

ಮೃತ ವಿದ್ಯಾರ್ಥಿನಿ ಆಶ್ನಿ ಶೆಟ್ಟಿ(21) ಮಂಗಳೂರಿನ ಕಾಲೇಜೊಂದರಲ್ಲಿ ಚಾರ್ಟೆಡ್ ಅಕೌಂಟೆಂಟ್ ಕಲಿಯುತ್ತಿದ್ದಳು.

ತಂದೆಯ ಜೊತೆ ಮನೆಯ ದನಗಳನ್ನು ಕಟ್ಟಲು ಹೋಗುತ್ತಿದ್ದ ಸಂದರ್ಭ ಕಡಿದು ಬಿದ್ದಿದ್ದ ವಿದ್ಯುತ್ ತಂತಿ ತಗುಲಿದ್ದು, ತೀವ್ರ ಅಸ್ವಸ್ಥ ಗೊಂಡ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ.

RELATED ARTICLES
- Advertisment -
Google search engine

Most Popular