ಬ್ರಹ್ಮಾವರ: ತಾಲ್ಲೂಕಿನ ಕುಂಜಾಲು ಬಸ್ ನಿಲ್ದಾಣದ ಸಮೀಪ ದುಷ್ಕರ್ಮಿಗಳು ದನದ ರುಂಡ ಎಸೆದಿದ್ದಾರೆ. ಶನಿವಾರ ತಡ ರಾತ್ರಿ ಈ ಘಟನೆ ಸಂಭವಿಸಿದ್ದು , ದನದ ತಲೆಯನ್ನು ದುಷ್ಕರ್ಮಿಗಳು ರಸ್ತೆಯಲ್ಲೇ ಎಸೆದು ಹೋಗಿದ್ದಾರೆ. ಘಟನೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ತಪ್ಪಿತಸ್ಥರ ಪತ್ತೆಗೆ ತುಳುನಾಡ ರಕ್ಷಣಾ ವೇದಿಕೆ ಪಟ್ಟು ಹಿಡಿದಿದ್ದಾರೆ. ಪ್ರಕರಣದ ಬಗ್ಗೆ ಬ್ರಹ್ಮಾವರ ಪೊಲೀಸರು ತನಿಖೆ ನಡೆಸುತ್ತಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ತುಳುನಾಡ ರಕ್ಷಣಾ ವೇದಿಕೆ ಬ್ರಹ್ಮಾವರ ಘಟಕವು ದುಷ್ಕರ್ಮಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಲಾಗಿದೆ. ಪೊಲೀಸರಿಗೆ ದೂರು ನೀಡಿದ ನಿಯೋಗದಲ್ಲಿ ಘಟಕದ ಅಧ್ಯಕ್ಷ ಪ್ರದೀಪ್, ದೀಪು ಚಾಂತಾರ್, ಪ್ರಧಾನ ಕಾರ್ಯದರ್ಶಿ ಶರತ್ ರಾಜ್ ಆರೂರು, ಉಪಾಧ್ಯಕ್ಷರು ಸಂದೇಶ್ ಶೆಟ್ಟಿ ಹೇರೂರು, ಕೋಶಾಧಿಕಾರಿ ನಿತಿನ್ ಶೆಟ್ಟಿ ಪೇತ್ರಿ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.