ಬೆಳಗಾವಿ: ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ ಮಾಡಲು ಮುಂದಾದ ಶ್ರೀರಾಮ ಸೇನೆ ಕಾರ್ಯಕರ್ತರನ್ನು ಯುವಕರ ಗುಂಪೊಂದು ಮರಕ್ಕೆ ಕಟ್ಟಿಹಾಕಿ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಂಗಳಿಯಲ್ಲಿ ನಡೆದಿದೆ. ಹಲ್ಲೆ ಮಾಡುತ್ತಿರುವ ದೃಶ್ಯವನ್ನು ಅದೇ ಗ್ರಾಮದ ಯುವಕನೊಬ್ಬ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದು, ವಿಡಿಯೋ ಈಗ ವೈರಲ್ ಆಗಿದೆ.