Tuesday, March 18, 2025
Homeಅಪರಾಧಗಾಂಜಾ ನಶೆಯಲ್ಲಿ ವಿದ್ಯಾರ್ಥಿಯ ವಿಕೃತ ಕೃತ್ಯ: ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ

ಗಾಂಜಾ ನಶೆಯಲ್ಲಿ ವಿದ್ಯಾರ್ಥಿಯ ವಿಕೃತ ಕೃತ್ಯ: ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ

ಧರ್ಮಪುರಿ : 12ನೇ ತರಗತಿ ವಿದ್ಯಾರ್ಥಿಯೊಬ್ಬ 5ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ ಮಾಡಿರುವ ಘಟನೆ ಧರ್ಮಪುರಿಯಲ್ಲಿ ಬುಧವಾರ ನಡೆದಿರುವುದು ಬೆಳಕಿಗೆ ಬಂದಿದೆ.

ಘಟನೆಯ ವಿವರ : ಬುಧವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ 5ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ನಾಪತ್ತೆಯಾಗಿದ್ಧಾನೆ. ವಿಷಯ ತಿಳಿದು ಪೋಷಕರು ನಾಪತ್ತೆಯಾದ ಮಗನ ಹುಡುಕಾಟದಲ್ಲಿ ತೊಡಗಿದ್ದು, ಮನೆಯ ಅಕ್ಕ-ಪಕ್ಕದವರನ್ನು ವಿಚಾರಿಸಿದ್ದಾರೆ. ಇದೇ ಸಮಯಕ್ಕೆ ಬಾಲಕನನ್ನು 12ನೇ ತರಗತಿಯ ಮತ್ತೋರ್ವ ವಿದ್ಯಾರ್ಥಿ ತನ್ನೊಂದಿಗೆ ಕರೆದುಕೊಂಡು ಹೋಗಿರುವುದಾಗಿ ತಿಳಿದು ಬಂದಿದೆ.

ಸಂಜೆಯವರೆಗೂ ಪೋಷಕರು ಹುಡುಕಾಟ ಮಾಡಿದರೂ ಬಾಲಕ ಮಾತ್ರ ಪತ್ತೆಯಾಗಲಿಲ್ಲ. ಈ ಹಿನ್ನಲೇಯಲ್ಲಿ ಗಾಬರಿಗೊಂಡ ಪೋಷಕರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿ ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ 12ನೇ ತರಗತಿಯವ ತನ್ನೊಂದಿಗೆ ಬಾಲಕನನ್ನು ಕರೆದುಕೊಂಡು ಹೋಗಿದ್ದು ಪತ್ತೆಯಾಗಿದೆ. ಅಲ್ಲದೇ ಆಚ್ವರ್ಯಕರ ಸಂಗತಿ ಏನೆಂದರೆ ಹಿಂತಿರುಗುವಾಗ 12ನೇ ತರಗತಿ ವಿದ್ಯಾರ್ಥಿ ಒಬ್ಬನೇ ಮಾತ್ರ ಹಿಂತಿರುಗಿರುವುದು ಸಿಸಿಟಿವಿಯಲ್ಲಿ ಕಂಡು ಬಂದಿದೆ.

ನಂತರ ಪೊಲೀಸರು 12ನೇ ತರಗತಿ ವಿದ್ಯಾರ್ಥಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಘಟನೆಯ ಬಗ್ಗೆ ಬಾಯ್ಬಿಟ್ಟಿದ್ದಾನೆ. ತಾನು 12ನೇ ತರಗತಿಯಲ್ಲಿ ಓದುತಿರುವುದಾಗಿ ತಿಳಿಸಿದ ಬಾಲಕ ತನ್ನೊಂದಿಗೆ ಕರೆದೊಯ್ದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದಾನೆ. ಬಳಿಕ ಆತ ಯಾರಿಗಾದರು ಹೇಳುತ್ತಾನೆ ಎಂಬ ಭಯದಿಂದ ಬಾವಿಗೆ ಎಸೆದಿರುವುದಾಗಿ ಹೇಳಿದ್ದಾನೆ.

12ನೇ ತರಗತಿಯ ವಿದ್ಯಾರ್ಥಿಯ ಹೇಳಿಕೆ ಆಧರಿಸಿ, ಕೂಡಲೇ ಪೊಲೀಸರು ಬಾವಿ ಬಳಿ ತೆರಳಿ ನೋಡಿದಾಗ ಬಾಲಕನ ಶವ ಪತ್ತೆಯಾಗಿದ್ದು,  ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಧರ್ಮಪುರಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ.

ಇನ್ನು ಕೃತ್ಯಕ್ಕೂ ಮುನ್ನಾ 12ನೇ ತರಗತಿಯ ಬಾಲಕ ಗಾಂಜಾ ಸೇವನೆ ಮಾಡಿದ್ದ ಎಂಬುದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯ ಎಸಗಿದ ಬಾಲಕನ ವಿರುದ್ಧ ಲೈಂಗಿಕ ದೌರ್ಜನ್ಯ, ಅಪಹರಣ ಮತ್ತು ಕೊಲೆಗೆ ಸಂಬಂಧಿಸಿದ 3 ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಲಾಗಿದೆ.

RELATED ARTICLES
- Advertisment -
Google search engine

Most Popular