ಅಳದಂಗಡಿ : ಸಮಾಜಸೇವೆಯ ಮಹತ್ತರ ಕಾರ್ಯಗಳಲ್ಲಿ ಒಂದಾದ ರಕ್ತದಾನದ ಮಹತ್ವವನ್ನು ಸಾರುವ ಉದ್ದೇಶದಿಂದ ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ (ರಿ), ಅಳದಂಗಡಿ ಹಾಗೂ ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್, ಮಂಗಳೂರು ಇವರ ಸಹಯೋಗದಲ್ಲಿ ಜೂನ್ 14ರಂದು ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
ಅಳದಂಗಡಿಯ ಶ್ರೀ ಸೋಮನಾಥೇಶ್ವರಿ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಈ ಶಿಬಿರವು ” ಹನಿ ರಕ್ತಕ್ಕಾಗಿ ಅಂಗಲಾಚುವವರ ಆಸರೆ ” ಎಂಬ ಧ್ಯೇಯವಾಕ್ಯದಡಿ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡುವ ಮೂಲಕ ಜೀವ ರಕ್ಷಣೆಯ ಪುಣ್ಯ ಕಾರ್ಯದಲ್ಲಿ ಪಾಲುದಾರರಾಗುವಂತೆ ಸಂಘಟಕರು ಮನವಿ ಮಾಡಿದ್ದಾರೆ.
ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆಗೆ ಒಳಗಾಗುವ ರೋಗಿಗಳು, ಅಪಘಾತ ಸಂತ್ರಸ್ತರು ಹಾಗೂ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ರಕ್ತದ ಅಗತ್ಯ ನಿರಂತರವಾಗಿರುವ ಹಿನ್ನೆಲೆಯಲ್ಲಿ ಈ ಶಿಬಿರಕ್ಕೆ ವಿಶೇಷ ಮಹತ್ವ ಲಭಿಸಿದೆ. ಆರೋಗ್ಯವಂತ ಯುವಕರು ಹಾಗೂ ಸಾರ್ವಜನಿಕರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗುವಂತೆ ಕರೆ ನೀಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
📞 94496 39709
📞 99646 66466
📞 99003 33135
📞 99641 15223

