ಶಿವಮೊಗ್ಗ: ಬೆಳೆಗೆ ಕೀಟನಾಶಕ ಸಿಂಪಡಿಸುವ ವೇಳೆ ದೇಹಕ್ಕೆ ವಿಷ ಸೇರಿ ಕೃಷಿಕ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಬಡೇನಕೊಪ್ಪದಲ್ಲಿ ನಡೆದಿದೆ.
ಗಣಪತಿ(50) ಮೃತಪಟ್ಟವರು. ತಮ್ಮ ಜಮೀನಿನಲ್ಲಿ ಬೆಳೆದಿದ್ದ ಅನಾನಸ್ ಬೆಳೆಗೆ ಕೀಟನಾಶಕ ಸಿಂಪಡಿಸಿದ್ದ ಗಣಪತಿ ಅವರ ದೇಹಕ್ಕೆ ವಿಷ ಸೇರಿದ್ದರಿಂದ ಅಲರ್ಜಿ ಉಂಟಾಗಿ ಚಿಕಿತ್ಸೆ ಪಡೆದಿದ್ದಾರೆ.
ನಂತರ ಅವರಿಗೆ ಆರೋಗ್ಯದಲ್ಲಿ ಏರುಪೇರಾಗಿ ಶಿವಮೊಗ್ಗದ ಮೆಗನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.