ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ( ರಿ.)ಬೆಂಗಳೂರು, ಮೂಡುಬಿದಿರೆ ತಾಲೂಕು ಸಮಿತಿಯ ವಾರ್ಷಿಕ ಮಹಾಸಭೆ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಎಸ್ ನಾಗೇಶ್ ಇವರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮವು ಏ. 5 ರಂದು ಮಧ್ಯಾಹ್ನ 2 ಗಂಟೆಗೆ ಸಮಾಜ ಮಂದಿರದಲ್ಲಿ ಸಮಿತಿಯ ಅಧ್ಯಕ್ಷರಾದ ಸುಧಾಕರ ಸಾಲ್ಯಾನ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಅಭಯಚಂದ್ರ ಜೈನ್, ಕರ್ನಾಟಕ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ, ಸುಚರಿತ ಶೆಟ್ಟಿ ಇವರ ಗೌರವ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.