Sunday, January 19, 2025
Homeರಾಜ್ಯಕೊಪ್ಪಳದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕಿ ಸಾವು

ಕೊಪ್ಪಳದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕಿ ಸಾವು

ಕೊಪ್ಪಳ: ಕೃಷಿ ಹೊಂಡಕ್ಕೆ ಬಿದ್ದು ಬಾಲಕಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ತಾಲೂಕಿನ ಮೆತಗಲ್ ಗ್ರಾಮದಲ್ಲಿ ನಡೆದಿದೆ.

ಅಮೃತ ಶಿವಪುರ (11) ಮೃತ ಬಾಲಕಿಯಾಗಿದ್ದಾಳೆ. ಎಳ್ಳ ಅಮವಾಸ್ಯೆ ಹಿನ್ನೆಲೆ ಕುಟುಂಬಸ್ಥರು ಸೇರಿ ಜಮೀನಿಗೆ ತೆರಳಿದ್ದ ವೇಳೆ ಶಿವಲಿಂಗಯ್ಯ ಎಂಬವರಿಗೆ ಸೇರಿದ ಕೃಷಿ ಹೊಂಡದಲ್ಲಿ ಈ ಅವಘಡ ಸಂಭವಿಸಿದೆ. ಆಟವಾಡುತ್ತಾ ಹೋಗಿ ಕೃಷಿ ಹೊಂಡದಲ್ಲಿ ಮಕ್ಕಳು ಬಿದ್ದಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಕೂಡಲೇ ಹೊಂಡಕ್ಕೆ ಬಿದ್ದ ಮೂರು ಮಕ್ಕಳನ್ನು ರಕ್ಷಿಸಿದ್ದು, ಆಸ್ಪತ್ರೆಗೆ ರಾವನಿಸಲಾಗಿದೆ.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಓರ್ವ ಬಾಲಕಿ ಮೃತಪಟ್ಟಿದ್ದಾಳೆ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

RELATED ARTICLES
- Advertisment -
Google search engine

Most Popular