ಬಂಟ್ವಾಳ: ರಾಜ್ಯ ಸರ್ಕಾರ ಬಡಜನರ ಆಶೋತ್ತರಗಳನ್ನು ಈಡೇರಿಸುವ ಮಹತ್ತರ ಉದ್ದೇಶದಿಂದ ಆರಂಭಿಸಿರುವ ಪಂಚ ಗ್ಯಾರಂಟಿ ಯೋಜನೆಗಳು ಅರ್ಹರಿಗೆ ತ್ವರಿತವಾಗಿ ತಲುಪುವಂತೆ ಮಾಡುವ ಹೊಣೆಗಾರಿಕೆ ‘ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ’ಗೆ ಇದೆ ಎಂದು ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಇಲ್ಲಿನ ಬಿ.ಸಿ.ರೋಡು ತಾಲ್ಲೂಕು ಕಚೇರಿ ಬಳಿ ‘ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ’ ಕಚೇರಿಯನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು. ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ ಮಾತನಾಡಿ, ಇಲ್ಲಿನ ಬಾಕಿ ಉಳಿದಿರುವ ಅರ್ಹ ಫಲಾನುಭವಿಗಳನ್ನು ಹುಡುಕಿ ಅವರಿಗೆ ಎಲ್ಲಾ ಸೌಲಭ್ಯ ಸಿಗುವಂತೆ ಪ್ರಯತ್ನಿಸುವುದಾಗಿ ತಿಳಿಸಿದರು. ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ ಮಾತನಾಡಿ, ಈಗಾಗಲೇ ಶೇ 90 ರಷ್ಟು ಮಂದಿ ಫಲಾನುಭವಿಗಳಿಗೆ ಯೋಜನೆ ತಲುಪಿದೆ. ಮುಂದಿನ ದಿನಗಳಲ್ಲಿ ‘ಗ್ಯಾರಂಟಿ ಫಲಾನುಭವಿಗಳ ಸಮಾವೇಶ’ ನಡೆಸಲು ಚಿಂತನೆ ನಡೆಸಲಾಗಿದೆ ಎಂದರು. ಸಮಿತಿ ಸದಸ್ಯರಾದ ಸುಧೀಂದ್ರ ಶೆಟ್ಟಿ, ಮಹಮ್ಮದ್ ಸಿರಾಜ್ ಎಂ., ಸತೀಶ್, ಮುರಳೀಧರ ವೈ., ವಿನಯ ಕುಮಾರ್, ಕಾಂಚಲಾಕ್ಷಿ, ಐಡಾ ಸುರೇಶ್, ಹರ್ಷನ್ ಬಿ, ಪವಿತ್ರಾ ಕೆ, ಚಂದ್ರಶೇಖರ ಆಚಾರ್ಯ, ಅಬ್ದುಲ್ ಮಜೀದ್, ಜನಾರ್ದನ ಸಪಲ್ಯ, ಕೃಷ್ಣಪ್ಪ ಪೂಜಾರಿ, ಎನ್.ಅಬ್ದುಲ್ ಕರೀಂ ಇದ್ದರು. ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಎಸ್.ಗಟ್ಟಿ, ಪುರಸಭಾಧ್ಯಕ್ಷ ವಾಸು ಪೂಜಾರಿ, ಪ್ರಮುಖರಾದ ಪಿಯೂಸ್ ಎಲ್.ರಾಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಬಿ.ಪದ್ಮಶೇಖರ ಜೈನ್, ಎಂ.ಎಸ್.ಮಹಮ್ಮದ್, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಸಂಪತ್ ಕುಮಾರ್ ಶೆಟ್ಟಿ, ಕೆ.ಸಂಜೀವ ಪೂಜಾರಿ ಮೆಲ್ಕಾರ್, ಬಾಲಕೃಷ್ಣ ಅಂಚನ್, ಚಂದ್ರಶೇಖರ ಭಂಡಾರಿ ಅಮ್ಮುಂಜೆ, ಕೆ.ಪದ್ಮನಾಭ ರೈ, ಅಬ್ಬಾಸ್ ಆಲಿ ಮತ್ತಿತರರು ಇದ್ದರು. ಸಮಿತಿ ಕಾರ್ಯದಶರ್ಿ, ತಾಲ್ಲೂಕು ಪಂಚಾಯಿತಿ ಇಒ ಸಚಿನ್ ಕುಮಾರ್ ಸ್ವಾಗತಿಸಿ, ವಂದಿಸಿದರು.