ಚಿಕ್ಕಬಳ್ಳಾಪುರ: ಇಲ್ಲಿನ ಹುನೇಗಲ್ ಗ್ರಾಮದ ಬಳಿ ಸಿಎನ್‍ಜಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಕ್ಯಾಂಟರ್‌ಗೆ ಗ್ರಾನೈಟ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಭಾರೀ ಪ್ರಮಾಣದ ಸ್ಫೋಟ ಸಂಭವಿಸಿದೆ.
ಘಟನೆಯಲ್ಲಿ ಚಾಲಕ ನರಸಿಂಹಮೂರ್ತಿ ಹಾಗೂ ಮಾದಪ್ಪ ಎಂಬವರಿಗೆ ಸುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುನೇಗಲ್ ಬಳಿ ಯೂ ಟರ್ನ್ ಪಡೆಯಲು ನಿಂತಿದ್ದ ಸಿಎನ್‍ಜಿ ಸಿಲಿಂಡರ್ ತುಂಬಿದ್ದ ಲಾರಿಗೆ, ಕಲ್ಲು ದಿಮ್ಮೆಗಳನ್ನು ಸಾಗಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದಿದ್ದು, ಈ ವೇಳೆ ಸಿಎನ್‍ಜಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ.
ಘಟನೆಯಿಂದ ಹುನೇಗಲ್ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿ ಆಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಕ್ರೇನ್ ಮೂಲಕ ಹಾನಿಗೊಳಗಾದ ವಾಹನ ತೆರವುಗೊಳಿಸಿ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.
ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಕ್ಯಾಂಟರ್‌ಗೆ ಲಾರಿ ಡಿಕ್ಕಿಯಾಗಿ ಸ್ಫೋಟ: ಇಬ್ಬರು ಗಂಭೀರ
RELATED ARTICLES