Tuesday, March 18, 2025
Homeನಿಧನದನ ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

ದನ ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

ಸುಳ್ಯ: ದನ ಮೈಮೇಲೆ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಮಾ. 7ರಂದು ಸಂಭವಿಸಿದೆ.

ಅಮರಪಟ್ನೂರು ಗ್ರಾಮದ ಚೊಕ್ಕಾಡಿಯ ನಿವಾಸಿ ನಡುಗಲ್ಲು ರಾಧಾಕೃಷ್ಣ ಮೃತಪಟ್ಟವರು. ಅವರು ಫೆ. 27ರಂದು ತಮ್ಮ ದನವನ್ನು ಮೇಯಲು ಕಟ್ಟಿ ಹಾಕಲೆಂದು ತೋಟದ ಬದಿಯಲ್ಲಿ ಕರೆದೊಯ್ಯುತ್ತಿರುವಾಗ ದನವು ಆಕಸ್ಮಿಕವಾಗಿ ಬರೆಯಿಂದ ಜಾರಿತು.

ದನದ ಕುತ್ತಿಗೆಗೆ ಕಟ್ಟಿದ್ದ ಹಗ್ಗ ಅವರ ಕೈಯಲ್ಲಿದ್ದುದರಿಂದ ಅವರು ದನದೊಂದಿಗೆ ಎಳೆಯಲ್ಪಟ್ಟರು ದನವು ಅವರ ಮೈಮೇಲೆ ಬಿದ್ದಿತು. ಅಲ್ಲಿದ್ದ ಕೊಕ್ಕೋ ಮರ ಮತ್ತು ಬರೆಯ ಮಧ್ಯದಲ್ಲಿ ರಾಧಾಕೃಷ್ಣ ಅವರು ಸಿಲುಕಿ ತೀವ್ರವಾಗಿ ಗಾಯಗೊಂಡಿದ್ದರು. ಮನೆಯವರು ಹಾಗೂ ಸ್ಥಳೀಯರು ಅವರನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಿದ್ದರು. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಬುಧವಾರ ಮೃತಪಟ್ಟರು.

RELATED ARTICLES
- Advertisment -
Google search engine

Most Popular