ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ತೋಬಾ ಟೇಕ್ ಸಿಂಗ್ ನಗರದ ಮನೆಯಲ್ಲಿ ಸಹೋದರನೊಬ್ಬ ತನ್ನ ಸಹೋದರಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.
ಮರ್ಯಾದೆಗೇಡು ಹತ್ಯೆ ಎಂದು ಶಂಕಿಸಲಾದ ಈ ಭಯಾನಕ ಕೃತ್ಯವನ್ನು ಈ ತಿಂಗಳ ಆರಂಭದಲ್ಲಿ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ ಮತ್ತು ತುಣುಕುಗಳು ಗುರುವಾರ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ.
ಸ್ಥಳೀಯ ಅಧಿಕಾರಿಗಳ ಪ್ರಕಾರ, ಮಾರ್ಚ್ 17 ಮತ್ತು 18 ರ ಮಧ್ಯರಾತ್ರಿ ಈ ಅಪರಾಧ ನಡೆದಿದೆ. ದುಷ್ಕರ್ಮಿಗಳು ಮಹಿಳೆಯ ದೇಹವನ್ನು ಹೂಳಿದ್ದರು. ಅಪರಾಧ ಬೆಳಕಿಗೆ ಬಂದ ನಂತರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.