ಕೊಚ್ಚಿ: ಹಾಸ್ಟೆಲ್ ಕಟ್ಟಡದ ಮೇಲ್ಮಾವಣಿಯಿಂದ ಬಿದ್ದು ವೈದ್ಯಕೀಯ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.
ಶಹಾನಾ (21) ಮೃತ ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದಾರೆ. ಅವರು ಎರ್ನಾಕುಲಂನ ಚಲಕಾದ ಶ್ರೀ ನಾರಾಯಣ ಇನ್ಸಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿಯಾಗಿದ್ದು, ಕಳೆದ ರಾತ್ರಿ ಕಾಲೇಜು ಹಾಸ್ಟೆಲ್ ಕಟ್ಟಡದ ಏಳನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾರೆ.
ಫಾತಿಮಾ ಹಾಸ್ಟೆಲ್‌ನ ಐದನೇ ಮಹಡಿಯಲ್ಲಿ ವಾಸಿಸುತ್ತಿದ್ದಾರೆ. ಏಳನೇ ಮಹಡಿಯಲ್ಲಿರುವ ತನ್ನ ಸ್ನೇಹಿತರನ್ನು ಭೇಟಿಯಾಗಲು ಹೋದಾಗ ಈ ಅಪಘಾತ ಸಂಭವಿಸಿದೆ. ಪೊಲೀಸರ ಪ್ರಕಾರ, ಸ್ನೇಹಿತರೊಂದಿಗೆ ಮಾತನಾಡುವಾಗ ಕಾಲು ಜಾರಿ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ.