ಚಾಮರಾಜನಗರ: ಇಬ್ಬರು ಮಕ್ಕಳ ಜತೆ ತಾಯಿ ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಹೊರೆಯಾಲ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಕ್ಕಳಿಗೂ ನೇಣು ಬಿಗಿದು, ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಹೊರೆಯಾಲ ಗ್ರಾಮದ ಜ್ಯೋತಿ(29) ಮಾನಸ (3) ಹಾಗೂ ಬಾಂಧವ್ಯ (7) ಮೃತ ದುರ್ದೈವಿಗಳು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಬೇಗೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.