ಚಿಕ್ಕಮಗಳೂರು: ಶೃಂಗೇರಿ ಶಾರದಾ ದೇಗುಲದಲ್ಲಿ ವಸ್ತ್ರಸಂಹಿತೆ ಜಾರಿಯಾದ ಬೆನ್ನಲ್ಲೇ ಇದೀಗ ಹೊರನಾಡು ಶ್ರೀ ಅನ್ನಪೂರ್ಣ ದೇವಸ್ಥಾನ ಆಡಳಿತ ಮಂಡಳಿ ವಸ್ತ್ರ, ಸಂಹಿತೆ ಜಾರಿಗೆ ತರಲು ಮುಂದಾಗಿದೆ.
ಸಂಪುದಾಯಿಕ ಉಡುಪುಗಳನ್ನು ಧರಿಸಿದವರಿಗೆ ಮಾತ್ರ ದೇವಸ್ಥಾನ ಪ್ರವೇಶಕ್ಕೆ ಅನುಮತಿ ನೀಡುವುದಾಗಿ ಆಡಳಿತ ಮಂಡಳಿ ಹೇಳಿದೆ. ಆಧುನಿಕ ಉಡುಪು ಧರಿಸಿ ದೇವಸ್ಥಾನಕ್ಕೆ ಭಕ್ತರು ಬರುವುದರಿಂದ ಇತರೆ ಭಕ್ತರಿಗೆ ಕಿರಿಕಿರಿ ಉಂಟು ಮಾಡುತ್ತಿದೆ. ಹಾಗಾಗಿ ಈ ನಿರ್ಧಾರ ತೆಗೆದುಕೊಂಡಿದೆ.
ಇನ್ನು ಗಂಡಸರು ಮತ್ತು ಗಂಡು ಮಕ್ಕಳು ಶಲ್ಯ, ಪ್ಯಾಂಟ್, ಪಂಚೆ ಧರಿಸಿ ಬರಬೇಕು. ಹೆಂಗಸರು ಮತ್ತು ಹೆಣ್ಣು ಮಕ್ಕಳು ಸೀರೆ ಮತ್ತು ಚೂಡಿದಾರ್ ಗಳಂತಹ ಸಂಪ್ರದಾಯಿಕ ಉಡುಪು ಧರಿಸಿ ಬಂದರೆ ಮಾತ್ರ ದೇವಸ್ಥಾನ ಒಳಗೆ ಪ್ರವೇಶಿಸಲು ಶ್ರೀ ಕ್ಷೇತ್ರ ಹೊರನಾಡು ಧರ್ಮಕರ್ತ ಜಿ.ಭೀಮೇಶ್ವರ ಜೋಷಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.