ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿಯ ಪ.ವರ್ಗದ ಮೊರಾರ್ಜಿ ದೇಸಾಯಿ ವಸತಿ ಶಾಲಾ ವಿದ್ಯಾರ್ಥಿನಿಯರಿಗೆ ಇಲ್ಲಿನ ಅಟೆಂಡರ್ ಲೈಂಗಿಕ ಕಿರುಕುಳ ಕೊಡುತ್ತಿದ್ದ ಆರೋಪ ಕೇಳಿಬಂದಿದ್ದು, ಪೊಲೀಸರು ಪೋಕ್ಸೋ ಕೇಸು ದಾಖಲಿಸಿದ್ದಾರೆ.
ವಸತಿ ಶಾಲೆಯ ಡಿ. ಗ್ರೂಪ್ ನೌಕರ ನಾಗರಾಜು ಆರೋಪಿಯಾಗಿದ್ದು, ಈತ ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋ ತೋರಿಸುವುದು ಸೇರಿದಂತೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎನ್ನಲಾಗಿದೆ. ಪದೇಪದೆ ವಿದ್ಯಾರ್ಥಿನಿಯರು ಕಿರುಕುಳ ನೀಡುತ್ತಿದ್ದು, ಇದರಿಂದ ಬೇಸತ್ತು ಪಾಲಕರಿಗೆ ವಿಚಾರ ತಿಳಿಸಿದ್ದರು. ಪಾಲಕರು ಶಾಲೆಗೆ ಬಂದು ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದರು.
ಮಹಿಳಾ ಮತ್ತು ಕಲ್ಯಾಣ ಇಲಾಖೆ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ, ಕೌನ್ಸಿಲಿಂಗ್ ನಡೆಸಿದ ಬಳಿಕ ವಿದ್ಯಾರ್ಥಿನಿ ದೂರಿನ ಮೇರೆಗೆ ಡಿ.ಗ್ರೂಪ್ ನೌಕರ ನಾಗರಾಜು ವಿರುದ್ಧ ಫೋಕ್ಸೋ ಕೇಸು ದಾಖಲಾಗಿದೆ. ಈ ನಡುವೆ ಆರೋಪಿ ತಲೆ ಮರೆಸಿಕೊಂಡಿದ್ದು, ಗುಂಡ್ಲುಪೇಟೆ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.