Sunday, July 14, 2024
Homeಉಡುಪಿಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶದ ಪೂರ್ವಭಾವಿ ಸಭೆ

ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶದ ಪೂರ್ವಭಾವಿ ಸಭೆ

ಮಾರ್ಚ್ 5 ರಂದು ಕಾರ್ಕಳದಲ್ಲಿ ನಡೆಯಲಿರುವ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶದ ಪೂರ್ವಭಾವಿಯಾಗಿ ಇಂದು ಬೋಳ, ಬೆಳ್ಮಣ್, ನಂದಳಿಕೆ ಗ್ರಾಮಗಳಲ್ಲಿ ಪಕ್ಷದ ಪ್ರಮುಖರ ಉಪಸ್ಥಿತಿಯಲ್ಲಿ ಸಭೆ ನಡೆಸಲಾಯಿತು.

ದಿನಾಂಕ 03-03-2024 ರಂದು ಉಡುಪಿಯಲ್ಲಿ ನಡೆಯುವ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ನಾಮಪತ್ರ ಸಲ್ಲಿಕೆಗೆ ಹಾಗೂ ಕಡಿಯಾಳಿಯಲ್ಲಿ ನಡೆಯಲಿರುವ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾರ್ಯಕರ್ತರ ಬೃಹತ್ ಸಮಾವೇಶದ ಬಗ್ಗೆಯೂ ಈ ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಪಕ್ಷದ ಪ್ರಮುಖರಾದ ಮಹಾವೀರ್ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಬೋಳ ಸತೀಶ್ ಪೂಜಾರಿ, ಕಾರ್ಯದರ್ಶಿ ಪ್ರವೀಣ್ ಸಾಲಿಯಾನ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಯರಾಮ್ ಸಾಲಿಯಾನ್, ಸೂರ್ಯಕಾಂತ್ ಶೆಟ್ಟಿ, ಬಾಲಕೃಷ್ಣ ಹೆಗ್ಡೆ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಧನುಷ್ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular