
ಕರ್ನಾಟಕ ಸರಕಾರದ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಎ.ಆರ್. ಸುಬ್ಬಯ್ಯ ಕಟ್ಟೆ ಅವರಿಂದ ಶತಮಾನೋತ್ಸವ ಆಚರಿಸುತ್ತಿರುವ ಪೆರಡಾಲ ಸರಕಾರಿ ಪ್ರೌಢಶಾಲೆಗೆ ಭೇಟಿ
ಶತಮಾನೋತ್ಸವದ ಸಂಭ್ರಮದಲ್ಲಿರುವ ಇಲ್ಲಿನ ಸರಕಾರಿ ಪ್ರೌಢಶಾಲೆಗೆ (GHS Perdala) ಕರ್ನಾಟಕ ಸರಕಾರದ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಎ.ಆರ್. ಸುಬ್ಬಯ್ಯ ಕಟ್ಟೆ ಅವರು ಭೇಟಿ ನೀಡಿ, ಶಾಲೆಯ ಶೈಕ್ಷಣಿಕ ಚಟುವಟಿಕೆಗಳನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಶತಮಾನೋತ್ಸವ ಸಮಿತಿಯ ವತಿಯಿಂದ ಅವರನ್ನು ಶಾಲು ಹೊದಿಸಿ, ಗೌರವಪೂರ್ವಕವಾಗಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಅವರು ಮಾತನಾಡಿ
“ನೂರು ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಪೆರಡಾಲ ಶಾಲೆಯು ಗಡಿಭಾಗದಲ್ಲಿ ಕನ್ನಡದ ಅಸ್ಮಿತೆಯನ್ನು ಉಳಿಸಿ ಬೆಳೆಸುವಲ್ಲಿ ಮಹತ್ತರ ಪಾತ್ರ ವಹಿಸಿದೆ. ಶತಮಾನೋತ್ಸವದ ಈ ಐತಿಹಾಸಿಕ ಸಂದರ್ಭದಲ್ಲಿ ಕೇವಲ ಉತ್ಸವಕ್ಕೆ ಸೀಮಿತವಾಗದೆ, ಶಾಲೆಯ ಮುಂದಿನ ಪೀಳಿಗೆಗೆ ಅನುಕೂಲವಾಗುವಂತಹ ಶಾಶ್ವತ ಅಭಿವೃದ್ಧಿ ಯೋಜನೆಗಳನ್ನು ರೂಪಿಸಬೇಕು. ಎಂದು ಹೇಳಿದರು. ಜಿ.ಎಚ್.ಎಸ್. ಪೆರಡಾಲದ ಮುಖ್ಯೋಪಾಧ್ಯಾಯಿನಿ ಸೌರಭ ಪಿ , ಪ್ರಚಾರ ಸಮಿತಿ ಯ ಅಖಿಲೇಶ್, ನಗುಮುಗಂ, ಅಬ್ದುಲ್ ಶಾಹಿದ್ ಉಪಸ್ಥಿತರಿದ್ದರು, ಮಾತೃ ಸಮಿತಿ ಅಧ್ಯಕ್ಷೆ ಜಸೀಲಾ ಸ್ವಾಗತಿಸಿ, ಸಮಿತಿ ಸಂಯೋಜಕರಾದ ಮನುರಾಜ್ ವಂದಿಸಿದರು .
