ಬನ್ನಂಜೆ ಬಸ್ ನಿಲ್ದಾಣದಲ್ಲಿ ಅಸ್ವಸ್ಥ ಮಹಿಳೆ ಪತ್ತೆ

0
136

ಉಡುಪಿ : ಉಡುಪಿಯ ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಅಪರಿಚಿತ ಮಹಿಳೆಯೊಬ್ಬರು ಅಸ್ವಸ್ಥಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ.

ಈ ಕುರಿತು ಮಹಿಳಾ ಪೊಲೀಸ್ ಠಾಣೆ ಹಾಗೂ 112 ತುರ್ತು ಸಹಾಯವಾಣಿ ಸಿಬ್ಬಂದಿ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದರು. ತಕ್ಷಣ ಸ್ಥಳಕ್ಕೆ ಧಾವಿಸಿದ ನಿತ್ಯಾನಂದ ಒಳಕಾಡು ಅವರು, ಮಹಿಳಾ ಪೊಲೀಸರ ಸಹಕಾರದೊಂದಿಗೆ ಅಸ್ವಸ್ಥ ಮಹಿಳೆಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದರು.

ಮಹಿಳೆಯ ಹೆಸರು ಹಾಗೂ ವಿಳಾಸದ ವಿವರಗಳು ಇನ್ನೂ ತಿಳಿದುಬಂದಿಲ್ಲ. ಅವರು ಶಿವಮೊಗ್ಗ ಜಿಲ್ಲೆಯವರಾಗಿರಬಹುದು ಎಂದು ಶಂಕಿಸಲಾಗಿದೆ.

ಮಹಿಳೆಯ ವಾರಸುದಾರರು ಅಥವಾ ಪರಿಚಯಸ್ಥರು ಉಡುಪಿ ಮಹಿಳಾ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.