ಮೂಡುಬಿದಿರೆ : ಸ್ವದೇಶಿ ಉತ್ಪನ್ನಗಳ ಬಳಕೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಮೂಡುಬಿದಿರೆಯಲ್ಲಿ ಎರಡು ದಿನಗಳ ವಿಶೇಷ ಖಾದಿ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮೂಡುಬಿದಿರೆ ತಾಲೂಕು ಶಾಖೆಯ ನೇತೃತ್ವದಲ್ಲಿ, ತಾಲೂಕು ಆಡಳಿತ ಮೂಡುಬಿದಿರೆ ಇವರ ಸಹಕಾರದೊಂದಿಗೆ ಹಾಗೂ ರೂರಲ್ ರಿಸೋರ್ಸ್ ಡೆವಲಪ್ಮೆಂಟ್ ಅಸೋಸಿಯೇಷನ್ (RRDA), ಬೆಂಗಳೂರು ಇವರ ಸಹಭಾಗಿತ್ವದಲ್ಲಿ ಈ ಮೇಳ ನಡೆಯಲಿದೆ.
ನವೆಂಬರ್ 23 ಮತ್ತು 24ರಂದು ಮೂಡುಬಿದಿರೆ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಮೇಳ ಆಯೋಜಿಸಲಾಗಿದ್ದು, ಪ್ರತಿದಿನ ಬೆಳಗ್ಗೆ 10ರಿಂದ ರಾತ್ರಿ 8ರವರೆಗೆ ಸಾರ್ವಜನಿಕರಿಗೆ ಖಾದಿ ಉತ್ಪನ್ನಗಳ ಪ್ರದರ್ಶನ ಮತ್ತು ಖರೀದಿಗೆ ಅವಕಾಶ ಕಲ್ಪಿಸಲಾಗಿದೆ.
ಖಾದಿ ಉತ್ಪನ್ನಗಳ ಬಳಕೆಯನ್ನು ಉತ್ತೇಜಿಸುವ ಈ ಮೇಳದಲ್ಲಿ ವಿವಿಧ ಖಾದಿ ಉತ್ಪನ್ನಗಳನ್ನು ವೀಕ್ಷಿಸಿ ಖರೀದಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ. ಅಲ್ಲದೆ, ಎಲ್ಲಾ ಇಲಾಖೆಗಳ ನೌಕರರು ಮೇಳದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮೂಡುಬಿದಿರೆ ತಾಲೂಕು ಘಟಕದ ಅಧ್ಯಕ್ಷ ಡಾ. ದೊರೆಸ್ವಾಮಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
