ಉಡುಪಿ ತಾಲೂಕು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ಪೌಷ್ಟಿಕ ಆಹಾರದ ಮಹತ್ವದ ಕುರಿತು ವಿಶೇಷ ಕಾರ್ಯಾಗಾರ

0
78

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ )ಉಡುಪಿ ತಾಲೂಕು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಇಂದು 76 ಬಡಗುಬೆಟ್ಟು ಕಾರ್ಯಕ್ಷೇತ್ರದ ಜ್ಞಾನಶ್ರೀ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಚಿಟ್ಪಾಡಿ, ದೇವಾಡಿಗರ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಹಾಬಲ ಶೆಟ್ಟಿ, ಅಧ್ಯಕ್ಷರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಅಂಬಾಗಿಲು ವಲಯ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು. ವಹಿಸಿಕೊಂಡಿದ್ದು ಹಿಂದಿನ ಕಾಲದ ಆಹಾರ ಪದ್ಧತಿಗೂ ಈಗಿನ ಕಾಲದಲ್ಲಿ ಆಗುತ್ತಿರುವ ಆಹಾರ ಪದ್ಧತಿಯ ಬದಲಾವಣೆ ಪರಿಣಾಮಗಳ ಬಗ್ಗೆ ತಿಳಿಸುತ್ತಾ , ಇಂತಹ ಮಾಹಿತಿ ಕಾರ್ಯಕ್ರಮಗಳು ಸಮಾಜಕ್ಕೆ ಅರಿವನ್ನು ಮೂಡಿಸುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತಿ ಜಯಕರ್, ಅಧ್ಯಕ್ಷರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್( ರಿ ) 76 ಬಡಗು ಬೆಟ್ಟು ಕಾರ್ಯಕ್ಷೇತ್ರ ಇವರು ವಹಿಸಿಕೊಂಡಿದ್ದು, ಜ್ಞಾನವಿಕಾಸ ಕಾರ್ಯಕ್ರಮದ ಮೂಲಕ ಇಂತಹ ಕಾರ್ಯಕ್ರಮಗಳ ಆಯೋಜನೆ ಮಾಡುತ್ತಿರುವುದು ತುಂಬಾ ಸಂತೋಷದ ವಿಷಯ ಇದರಿಂದ ನಮಗೆ ತುಂಬಾ ಅನುಕೂಲವಾಗಿದೆ ಎಂದು ತಿಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ. ಅನ್ವಿತಾ. ಯು. ವೈದ್ಯಾಧಿಕಾರಿ ಎಸ್ ಡಿ ಎಮ್ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯ, ಸೌಖ್ಯವನ ಪರೀಕ ಇವರು ಆರೋಗ್ಯಕರ ಜೀವನಕ್ಕೆ ಆಹಾರ ಕ್ರಮಗಳ ಬಗ್ಗೆ, ಧಾನ್ಯಗಳು ಹಣ್ಣು ಹಂಪಲುಗಳು, ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಉಪಯೋಗಗಳ ಬಗ್ಗೆ, ಸಾಮಾನ್ಯವಾಗಿ ಜನರಲ್ಲಿ ಕಂಡುಬರುವ ಬಿಪಿ, ಶುಗರ್, ಕೊಲೆಸ್ಟ್ರಾಲ್, ಗ್ಯಾಸ್ಟಿಕ್ ಸಮಸ್ಯೆಗಳಿಗೆ ಆಹಾರ ಕ್ರಮಗಳ ಬಗ್ಗೆ ವಿವರಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಲಕ್ಷ್ಮಿ ದಿವಾಕರ್ ಯೋಗ ಶಿಕ್ಷಕರು, ಕ್ಷೇತ್ರಯೋಜನಾಧಿಕಾರಿಗಳಾದ ಸುರೇಂದ್ರ ನಾಯ್ಕ್ ರವರು ಉಪಸ್ಥಿತರಿದ್ದರು. ಕೇಂದ್ರದ ಸದಸ್ಯರಾದ ಹೇಮರವರು ಆರೋಗ್ಯಕರ ಅಗಸೆ ಬೀಜದ ಲಾಡು ಮಾಡುವ ವಿಧಾನವನ್ನು ಪ್ರಾತ್ಯಕ್ಷಿಕೆ ಮೂಲಕ ವಿವರಿಸಿ ಅದರ ಉಪಯೋಗಗಳನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಜ್ಞಾನವಿಕಾಸ ಸಮನ್ವಯಾಧಿಕಾರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು, ಸೇವಾ ಪ್ರತಿನಿಧಿ ಜ್ಯೋತಿರವರು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಪ್ರಾರ್ಥನೆಯನ್ನು ಮಮತಾ, ನಿರೂಪಣೆ ಶೋಭಾ,ಸ್ವಾಗತ ಸಂಧ್ಯಾ, ಧನ್ಯವಾದವನ್ನು ವಿದ್ಯಾ ವಿದ್ಯಾರವರು ನೆರವೇರಿಸಿದರು.