ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ, ಪ್ರಖರ ಹಿಂದೂವಾದಿ, ಸಂಘದ ಅನನ್ಯ ಜವಾಬ್ದಾರಿಗಳನ್ನು ನಿರ್ವಹಿಸಿ ಸಾವಿರಾರು ಕಾರ್ಯಕರ್ತರಿಗೆ ಅಮೂಲ್ಯ ಮಾರ್ಗದರ್ಶನ ನೀಡುತ್ತಾ ಬಂದಿರುವ ಪಾಂಡುರಂಗ ಶಾನುಭಾಗ್ ರವರ ಜೀವನಾದರ್ಶಗಳು ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ.
ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರ ಶಾಂತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಉಡುಪಿ ಜಿಲ್ಲಾ ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.