ನವದೆಹಲಿ: ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿಯ ವಿದ್ಯಾರ್ಥಿಯೊಬ್ಬನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ವಿದ್ಯಾರ್ಥಿ ಪರೀಕ್ಷೆಗೆ ಹಾಜರಾಗಲು ಬಯಸದೇ 23 ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ದಕ್ಷಿಣ ದೆಹಲಿಯ ಉಪ ಪೊಲೀಸ್ ಆಯುಕ್ತ ಅಂಕಿತ್ ಚೌಹಾಣ್ ಮಾತನಾಡಿ, ಶಂಕಿತ ವಿದ್ಯಾರ್ಥಿ ದೆಹಲಿಯ 23 ಶಾಲೆಗಳಿಗೆ ಬೆದರಿಕೆ ಇಮೇಲ್‌ಗಳನ್ನು ಕಳುಹಿಸಿದ್ದ. ತಾನು ಈ ಹಿಂದೆ ಬೆದರಿಕೆ ಇಮೇಲ್‌ಗಳನ್ನು ಕಳುಹಿಸಿದ್ದಾಗಿ ಒಪ್ಪಿಕೊಂಡಿದ್ದಾನೆ. ಅಪ್ರಾಪ್ತ ಯುವಕ ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು ಶಾಲೆಗಳಲ್ಲಿ ಆತಂಕದ ವಾತಾವರಣ ಸೃಷ್ಟಿಸಲು ತಿರ್ಮಾನಿಸಿದ್ದ, ಈ ಹಿನ್ನೆಲೆ ಬಾಂಬ್ ಬೆದರಿಕೆ ಇಮೇಲ್ ಕಳುಹಿಸಿದ್ದು, ಇದರಿಂದ ಪರೀಕ್ಷೆ ರದ್ದಾಗಲಿ ಎಂದು ಆತ ಬಯಸಿದ್ದ ಎಂದು ತಿಳಿಸಿದ್ದಾರೆ.