ಮಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಪಾದಚಾರಿ ಮೇಲೆ ಟ್ಯಾಂಕರ್ ಹರಿದು ಆತ ಸಾವನ್ನಪ್ಪಿರುವ ಘಟನೆ ನಡೆದಿದೆ. ನಗರದ ಕೂಳೂರಿನಲ್ಲಿ ಘಟನೆ ನಡೆದಿದೆ.
ಕೂಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಉತ್ತರ ಪ್ರದೇಶ ಮೂಲದ ಕಾರ್ಮಿಕ, 29ರ ಹರೆಯದ ಗುಡ್ಡು ಯಾದವ್ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದಾನೆ. ಈ ವೇಳೆ ಅದೇ ಮಾರ್ಗದಲ್ಲಿ ಬಂದ ಟ್ಯಾಂಕರ್ ಆತನ ಮೇಲೆ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಾಗಿದೆ.
ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಪಾದಚಾರಿ ಮೇಲೆ ಹರಿದ ಟ್ಯಾಂಕರ್: ಪಾದಚಾರಿ ಸ್ಥಳದಲ್ಲೇ ಸಾವು
RELATED ARTICLES