ದೇವರ ದರ್ಶನ ಮುಗಿಸಿ ಹಿಂದಿರುಗುವಾಗ ಭೀಕರ ಅಪಘಾತ – ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತ್ಯು

0
130

ಬಳ್ಳಾರಿ : ದೇವರ ದರ್ಶನ ಮುಗಿಸಿ ಹಿಂದಿರುಗುತ್ತಿದ್ದಾಗ ನಡೆದ ಭೀಕರ ಅಪಘಾತದಲ್ಲಿ , ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ಬಳ್ಳಾರಿಯ ಸಿರುಗುಪ್ಪ ತಾಲ್ಲೂಕಿನ ದೇವಿನಗರ ಕ್ಯಾಂಪ್ ಬಳಿಯ ಬಳ್ಳಾರಿ-ಸಿರುಗುಪ್ಪ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ತಮಿಳುನಾಡಿನ ದೇವಸ್ಥಾನಕ್ಕೆ ಹೋಗಿ ಮರಳಿ ಬರುತ್ತಿದ್ದ ನಿಟ್ಟೂರು ಗ್ರಾಮದ ಕುಟುಂಬವಿದ್ದ ಕಾರು ಅತಿವೇಗ ಅಥವಾ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ರಸ್ತೆ ಬದಿಯ ಕಟ್ಟೆಗೆ ಡಿಕ್ಕಿಯಾಗಿ ಪಲ್ಟಿಯಾಗಿರಬಹುದು ಎಂದು ಶಂಕಿಸಲಾಗಿದೆ. ಪ್ರಸಾದ್ ರಾವ್, ಸಂಧ್ಯಾ , ವಿಜಯ ಮೃತರು. ಇನ್ನಿಬ್ಬರಿಗೆ ಗಂಭೀರ ಗಾಯವಾಗಿದ್ದು , ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅಪಘಾತದ ಮಾಹಿತಿ ತಿಳಿದ ಕೂಡಲೇ ಸಿರುಗುಪ್ಪ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

LEAVE A REPLY

Please enter your comment!
Please enter your name here