ನವದೆಹಲಿ: ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದ್ದ ಜ್ಞಾನವ್ಯಾಪಿ ಮಸೀದಿ ಆವರಣದ ಸರ್ವೆ ನಡೆಸಲು ತೀರ್ಪು ನೀಡಿದ್ದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಿಗೆ ಅಂತಾರಾಷ್ಟ್ರೀಯ ಬೆದರಿಕೆ ಕರೆಗಳು ಬಂದಿವೆ ಎಂದು ವರದಿಯಾಗಿದೆ. ತನಗೆ ದುರುದ್ದೇಶಪೂರಿತ ಅಂತಾರಾಷ್ಟ್ರೀಯ ಕರೆಗಳು ಮತ್ತು ಜೀವ ಬೆದರಿಕೆಗಳು ಬರುತ್ತಿವೆ ಎಂದು ನ್ಯಾಯಾಧೀಶ ರವಿ ಕುಮಾರ್ ದಿವಾಕರ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಏ. 15ರಂದು ತನಗೆ ಅಂತಾರಾಷ್ಟ್ರೀಯ ಸಂಖ್ಯೆಯಿಂದ ಕರೆ ಬಂದಿದೆ ಮತ್ತು ಅದರಲ್ಲಿ ಕೊಲೆ ಬೆದರಿಕೆ ಹಾಕಿದ್ದಾರೆ. ಕೆಲವು ದಿನಗಳ ನಂತರ ಮತ್ತೆ ಅದೇ ರೀತಿಯ ಕರೆ ಬಂದಿದೆ ಎಂದು ಬರೇಲಿ ಪೊಲೀಸ್ ವರಿಷ್ಠಾಧಿಕಾರಿಗೆ ಅವರು ಬರೆದ ಪತ್ರದಲ್ಲಿ ತಿಳಿಸಿದ್ದಾರೆ.