ಮಂಗಳೂರಿನಲ್ಲಿ ತಲೆಎತ್ತಲಿದೆ ತಿರುಪತಿ ದೇವಸ್ಥಾನ

0
10

ಒಂದು ವರ್ಷದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ಲೋಕಾರ್ಪಣೆ ನಿರೀಕ್ಷೆ

ಮಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿನ ಬಳಿಕ ರಾಜ್ಯದಲ್ಲಿ ಮತ್ತೊಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ವತಿಯಿಂದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ಮಂಗಳೂರಿನಲ್ಲಿ ನಿರ್ಮಾಣಗೊಳ್ಳಲಿದೆ. ಸುರತ್ಕಲ್ ಸಮೀಪದ ಬಡಗ ಎಕ್ಕಾರು ಬೆಟ್ಟು ಪ್ರದೇಶದಲ್ಲಿ ನೂತನ ದೇವಸ್ಥಾನ ನಿರ್ಮಾಣಕ್ಕೆ ಸಿದ್ಧತೆಗಳು ನಡೆಯುತ್ತಿದ್ದು, ಸುಮಾರು ಒಂದು ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡುವ ಉದ್ದೇಶ ಹೊಂದಲಾಗಿದೆ.

ರಾಜ್ಯದಲ್ಲಿ ಇದುವರೆಗೆ ಬೆಂಗಳೂರಿನಲ್ಲಿ ಮಾತ್ರ ಟಿಟಿಡಿ ವತಿಯಿಂದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನವಿದ್ದು, ಇದೀಗ ಕರಾವಳಿ ಭಾಗದ ಮಂಗಳೂರಿನಲ್ಲಿ ಎರಡನೇ ದೇವಸ್ಥಾನ ನಿರ್ಮಾಣವಾಗಲಿದೆ.

ದೇವಸ್ಥಾನ ನಿರ್ಮಾಣಕ್ಕಾಗಿ ಮಂಗಳೂರಿನಲ್ಲಿ ಒಟ್ಟು 10 ಎಕರೆ ಜಮೀನು ಮಂಜೂರು ಮಾಡುವ ನಿರ್ಧಾರವನ್ನು ಇತ್ತೀಚೆಗೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಈ ಮೂಲಕ ಕರಾವಳಿ ಭಾಗದ ಭಕ್ತರಿಗೆ ತಿರುಪತಿ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಹಾಗೂ ಧಾರ್ಮಿಕ ಸೇವೆಗಳನ್ನು ಸ್ಥಳೀಯವಾಗಿಯೇ ಪಡೆಯಲು ಅವಕಾಶ ದೊರೆಯಲಿದೆ.

ಸುರತ್ಕಲ್ ಬಳಿಯ ಬಡಗ ಎಕ್ಕಾರು ಬೆಟ್ಟು ಪ್ರದೇಶದಲ್ಲಿ ನಿರ್ಮಾಣಗೊಳ್ಳಲಿರುವ ಈ ದೇವಸ್ಥಾನವು ಕರಾವಳಿಯ ಪ್ರಮುಖ ಧಾರ್ಮಿಕ ಕೇಂದ್ರವಾಗಿ ರೂಪುಗೊಳ್ಳುವ ನಿರೀಕ್ಷೆಯಿದೆ.