ಪ್ರದೀಪ್ ಪೂಜಾರಿ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್ : ಮಧ್ಯಪ್ರದೇಶದಲ್ಲಿ ಇಬ್ಬರು ಆರೋಪಿಗಳು ವಶಕ್ಕೆ!

0
41

ಉಡುಪಿ: ಪ್ರದೀಪ್ ಪೂಜಾರಿ ಅವರ ಮೇಲಿನ ಹಲ್ಲೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಮಧ್ಯಪ್ರದೇಶದಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಪೊಲೀಸರು ಆರೋಪಿಗಳನ್ನು ಮಧ್ಯಪ್ರದೇಶದಲ್ಲಿ ಪತ್ತೆಹಚ್ಚಿ ವಶಕ್ಕೆ ಪಡೆದಿದ್ದು, ಸದ್ಯ ಅವರನ್ನು ಉಡುಪಿಗೆ ಕರೆತರಲಾಗುತ್ತಿದೆ. ಉಡುಪಿಗೆ ತಲುಪಿದ ಬಳಿಕ ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಅಧಿಕೃತವಾಗಿ ಬಂಧಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.

ಆರೋಪಿಗಳ ಗುರುತು ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಇತರ ಮಾಹಿತಿಗಳನ್ನು ಕಾನೂನು ಪ್ರಕ್ರಿಯೆ ಪೂರ್ಣಗೊಂಡ ನಂತರ ಬಹಿರಂಗಪಡಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದು, ಆರೋಪಿಗಳ ವಿಚಾರಣೆಯ ಬಳಿಕ ಮತ್ತಷ್ಟು ವಿವರಗಳು ಲಭ್ಯವಾಗುವ ನಿರೀಕ್ಷೆಯಿದೆ.